ಹಜ್ ಯಾತ್ರೆ: ಮಂಗಳೂರಿನಿಂದ ನೇರ ವಿಮಾನ ಯಾನ ರದ್ದು..!!
ಮಂಗಳೂರು: ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರ ಪ್ರಯಾಣ ಅವಕಾಶವನ್ನು ರದ್ದುಪಡಿಸಲಾಗಿದೆ. ಕೋವಿಡ್ ಸಾಂಕ್ರಾಮಿಕದ ಬಳಿಕ ಮತ್ತೆ ಮಂಗಳೂರು ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ತೆರಳಲು ಯಾತ್ರಿಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಹಜ್ ಯಾತ್ರೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೂ ಯಾತ್ರಿ ಗಳಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮಾನ ಹತ್ತುವ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾ ಗಿತ್ತು. ಆದರೆ, ಭಾರತೀಯ ಹಜ್ ಸಮಿತಿಯು ದೇಶದ ಹಲವಾರು ರಾಜ್ಯ ಗಳಲ್ಲಿನ ವಿಮಾನ ಹತ್ತುವ ಕೇಂದ Åಗಳನ್ನು (ಎಂಬಾರ್ಕೇಶನ್ ಸೆಂಟರ್) ರದ್ದು […]
ನನ್ನ ಆಡಳಿತಾವಧಿಯಲ್ಲಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭಿವೃದ್ದಿ ಕಾರ್ಯ: ರಮಾನಾಥ ರೈ
ಬಂಟ್ವಾಳ : ಸಚಿವನಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ 5000 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಬಂಟ್ವಾಳದಲ್ಲಿ ಏನಾದರೂ ಸರಕಾರಿ ಯೋಜನೆಗಳು ಕಾರ್ಯಗತವಾಗಿದ್ದರೆ ಅದು ನನ್ನ ಅವಧಿಯಲ್ಲಿ ಜಾರಿಯಾಗಿರುವಂತದ್ದು. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಾಗಿದ್ದರೂ, ಅಪಪ್ರಚಾರದಿಂದ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಅಪಪ್ರಚಾರ, ಸುಳ್ಳು, ವದಂತಿಗಳನ್ನು ಹರಡುವ ಮೂಲಕ, ವೈಯಕ್ತಿಕ ತೇಜೋವಧೆಯ ಮೂಲಕ ಸೋಲಿಸಿದ ವಿಧಾನದ ಬಗ್ಗೆ ನನಗೆ ಬೇಸರವಿದೆ. ಬಿಜೆಪಿಯ ಇಂತಹ ಕೃತ್ಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗಮನವಿಟ್ಟು ಕೆಲಸ […]
ಬೆಳ್ತಂಗಡಿ: ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಮೇ.5 ರಂದು ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಅವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.
ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ
ತಿರುವನಂತಪುರಂ: ಶುಕ್ರವಾರ ಮಧ್ಯಂತರ ಆದೇಶ ನೀಡಿದ ಕೇರಳ ಹೈಕೋರ್ಟ್, ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ನೀಡಿದ ‘ಎ’ ಪ್ರಮಾಣೀಕರಣವನ್ನು ಕಾನೂನುಬಾಹಿರ ಎಂದು ಘೋಷಿಸಲು ನಿರಾಕರಿಸಿದೆ. ನಾಗರೇಶ್ ಮತ್ತು ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠವು ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆ ಶುಕ್ರವಾರ ಕೇರಳದಲ್ಲಿ ಬಿಡುಗಡೆಯಾದ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. […]
ಕಾಂಚನ್ ಉಪನಾಮಕ್ಕೆ ಮಾಡಿದ ಅವಮಾನ ಮೊಗವೀರ ಸಮುದಾಯಕ್ಕೆ ಅವಮಾನ ಮಾಡಿದಂತೆ: ರಮೇಶ್ ಕಾಂಚನ್
ಉಡುಪಿ: ಕಾಂಚನ್ ಎನ್ನುವುದು ಕರಾವಳಿ ತಡಿಯ ಉಡುಪಿಯ ಶ್ರಮ ಜೀವಿಗಳಾದ ಮೊಗವೀರ ಸಮುದಾಯದ ಹೆಮ್ಮೆಯ ಕುಲನಾಮ. ಇಲ್ಲಿ ಕಾಂಚನ್ ಮೂಲ ಸ್ಥಾನ ಕೂಡ ಹೊಂದಿದೆ. ಆದರೆ ನಮ್ಮ ಕುಲನಾಮವನ್ನು ಉಡುಪಿ ಬಿಜೆಪಿಯ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ವಿಕಾರವಾಗಿ ತಿರುಚಿ ಇಡೀ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಸಮಾಜ ಬಾಂಧವರು ವಿಚಲಿತರಾಗದೇ ಶಾಂತಿಯುತವಾಗಿ ಇರಬೇಕೆಂದು ಇಡೀ ಸಮಾಜದ ಪರವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿಕೊಂಡಿದ್ದಾರೆ. ಕೈಲಾಗದವರ ಕೊನೆಯ ಅಸ್ತ್ರ ಅಪಪ್ರಚಾರ. ಗೆಲ್ಲುವ ಅಮಲಿನಲ್ಲಿದ್ದ ಬಿಜೆಪಿ ನಾಯಕರು ಪ್ರಸಾದ್ […]