ಚುನಾವಣಾ ಕರ್ತ್ಯವ್ಯಕ್ಕೆ ತೆರಳುವ ಸಿಬ್ಬಂದಿಗಳಿಗಾಗಿ ತಾಲೂಕುವಾರು ಬಸ್ ವ್ಯವಸ್ಥೆಯ ಮಾಹಿತಿ ಇಲ್ಲಿದೆ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಅಧಿಕಾರಿ/ಸಿಬ್ಬಂದಿಗಳನ್ನು PRO, APRO, PO ಆಗಿ ನಿಯೋಜಿಸಿ ಆದೇಶಿಸಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ತಮಗೆ ನಿಯೋಜಿಸಿದ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಮೇ 09 ರಂದು ಹಾಜರಾಗಬೇಕಾಗಿದೆ. ವಿವಿಧ ತಾಲೂಕುಗಳಿಂದ ಚುನಾವಣಾ ಕರ್ತವ್ಯಕ್ಕೆ ಹೊರಡುವ PRO, APRO, PO ಗಳನ್ನು ಸದ್ರಿಯವರ ತಾಲೂಕು ಕೇಂದ್ರಗಳಿಂದ ಸದ್ರಿಯವರನ್ನು ನಿಯೋಜಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ಸುಗಳ ವ್ಯವಸ್ಥೆಯನ್ನು ಈ ಕೆಳಗಿನ ಬೈಂದೂರು, ಕುಂದಾಪುರ, ಉಡುಪಿ, […]

ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಮಂಗಳೂರು: ಕರಾವಳಿ ಕರ್ನಾಟಕದ ಪ್ರಥಮ ನಗರ ಕೇಂದ್ರಿತ ಕೋ-ಆಪ್ ಬ್ಯಾಂಕ್‌ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಸಂಸ್ಥಾಪಕರ ದಿನವನ್ನು ಮೇ 7 ರಂದು ಬ್ಯಾಂಕಿನ ಆಡಳಿತ ಕಚೇರಿ ಆವರಣದಲ್ಲಿ 111 ವರ್ಷಗಳ ಸಮರ್ಪಿತ ಸಮಾಜ ಸೇವೆಯನ್ನು ಪೂರ್ಣಗೊಳಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಫಾ.ಬೋನವೆಂಚರ್ ನಜರೆತ್ ಅವರು ಪವಿತ್ರ ಪೂಜೆಯನ್ನು ನೆರವೇರಿಸಿ ಈ ದಿನದ ಮಹತ್ವವನ್ನು ವಿವರಿಸಿದರು. ದೂರದೃಷ್ಟಿಯ ಸಂಸ್ಥಾಪಕ ಪಿಎಫ್‌ಎಕ್ಸ್ ಸಲ್ಡಾನ್ಹಾ ಅವರು ಸಮಾಜದ ಅನುಕೂಲಕ್ಕಾಗಿ ಸ್ಥಾಪಿಸಿದ ಶ್ರೇಷ್ಠ ಸಂಸ್ಥೆಯ ಉದಾತ್ತ ಕಾರ್ಯವನ್ನು ಸ್ಮರಿಸಿದರು. ಕಳೆದ […]

ಕಾರ್ಕಳ ತಾಲೂಕಿನಾದ್ಯಂತ ಮುನಿಯಾಲು ಉದಯ ಶೆಟ್ಟಿ ಭರ್ಜರಿ ಪ್ರಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅವರಿಂದ ಕೊನೆ ಕ್ಷಣದ ಪ್ರಚಾರ ಸಭೆ ಮತ್ತು ಮತಯಾಚನೆ ಭರ್ಜರಿಯಾಗಿ ನಡೆಯಿತು. ಹೆಬ್ರಿ ತಾಲೂಕಿನ ಗೇರುಬೀಜ ಕಾರ್ಖಾನೆ, ಬಜಗೋಳಿಯ ಪೇಟೆ, ಬೆಳ್ಮಣ್ ಪೇಟೆ, ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಇನ್ನಾ ಪೇಟೆ, ಹೆಬ್ರಿ ತಾಲೂಕಿನ ಶಿವಪುರದ ಕೋಮಲ್ ಗೇರುಬೀಜ ಕಾರ್ಖಾನೆ, ಮೊದಲಾದ ಕಡೆಗಳಲ್ಲಿ ಮುನಿಯಾಲು ಉದಯ್ ಶೆಟ್ಟಿ ಅವರು ಭರ್ಜರಿ ಪ್ರಚಾರ ನಡೆಸಿ,ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ತನ್ನನ್ನು ಬೆಂಬಲಿಸಿ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿಕೊಂಡರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ ಭಾರತೀಯ ಜನತಾ ಪಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿರುವ ‘ಕರ್ನಾಟಕದ ಸಾರ್ವಭೌಮತ್ವ’ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶನಿವಾರದಂದು ಸೋನಿಯಾ ಗಾಂಧಿ ಅವರು ಕರ್ನಾಟಕದ ಹುಬ್ಬಳ್ಳಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಪೋಸ್ಟ್ ಈ ಬಗ್ಗೆ ಪೋಸ್ಟ್ ಮಾಡಿ, “ಸಿಪಿಪಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ 6.5 ಕೋಟಿ ಕನ್ನಡಿಗರಿಗೆ […]

ಕಾರ್ಕಳ ಶಾಸಕರಿಗೆ ಸೋಲಿನ ಭಯ, ಹಾಗಾಗಿ ಸ್ಟಾರ್ ಕ್ಯಾಂಪೇನರ್ ಪ್ರಚಾರಕ್ಕೆ ಬಂದಿದ್ದಾರೆ: ಶುಭದ್ ರಾವ್

ಕಾರ್ಕಳ: ಈ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ ಬೇರೆ ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕರಾಗಿ ಹೋಗಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಬಾರಿ ತನ್ನ ಸೋಲಿನ ಭಯದಿಂದ ಸ್ಟಾರ್ ಕ್ಯಾಂಪೇನರ್ ಯೋಗಿ ಅವರನ್ನು ಕಾರ್ಕಳಕ್ಕೆ ಕರೆಸಿಕೊಳ್ಳುವಂತಹ ಸ್ಥಿತಿಗೆ ಬಂದದ್ದು ವಿಷರ್ಯಾಸ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್ ರಾವ್ ಹೇಳಿದ್ದಾರೆ. ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಾರ್ಕಳ ಕಾಂಗ್ರೆಸ್ ಗೆ ಸ್ಟಾರ್ ಪ್ರಚಾರಕರ ಅವಶ್ಯಕತೆಯಿಲ್ಲ, ನಮಗೆ ನಮ್ಮ ಅಮೂಲ್ಯ ಕಾರ್ಯಕರ್ತರೇ ನಮ್ಮ […]