ರಾಜ್ಯದಲ್ಲಿ ಇದುವರೆಗೆ ಶೇ.52.03ರಷ್ಟು ಮತದಾನ: ಅವಿಭಜಿತ ದ.ಕ ಜಿಲ್ಲೆಯಲ್ಲಿ ಮತದಾರರ ಸರತಿ ಸಾಲು!

ಬೆಂಗಳೂರು: 224 ಸ್ಥಾನಗಳ ಕರ್ನಾಟಕ ವಿಧಾನಸಭೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.52.03ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದುವರೆಗಿನ ಅಂಕಿ ಅಂಶಗಳ ಪ್ರಕಾರ ರಾಮನಗರದಲ್ಲಿ ಅತಿ ಹೆಚ್ಚು ಅಂದರೆ ಶೇ.63.3ರಷ್ಟು ಮತದಾನವಾಗಿದೆ. ಏತನ್ಮಧ್ಯೆ, ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಬೆಳಗ್ಗೆಯಿಂದಲೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ಉತ್ಸಾಹಿ ಮತದಾರರು ಉದ್ದನೆಯ ಸರತಿ ಸಾಲಿನಲ್ಲಿ […]

ಮತದಾನದ ಹಕ್ಕು ಚಲಾಯಿಸಿದ ರಕ್ಷಿತ್ ಶೆಟ್ಟಿ; ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. “ನಾನು ಚಿಕ್ಕವನಾಗಿದ್ದಾಗ ಉಡುಪಿ ಬೆಳೆಯಬೇಕು ಎಂಬ ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಅಂತ ಅನಿಸುತ್ತೆ. ನಾಯಕನಾದವ […]

ಕಾಂಗ್ರೆಸ್ ಪಕ್ಷದ ನಾಯಕರಿಂದ ಮತಚಲಾವಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷಾಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತಚಲಾಯಿಸಿದರು. #WATCH | Former Karnataka CM and Congress candidate from Varuna constituency, Siddaramaiah casts his vote for #KarnatakaElection pic.twitter.com/SPjUIzCOcF — ANI (@ANI) May 10, 2023 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಕೂಡಾ ತಮ್ಮ ಮತಚಲಾಯಿಸಿದರು. #WATCH | #KarnatakaElections | Congress national president Mallikarjun […]

ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು

ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ. ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಕೂಡಾ ಪರಿವಾರ […]

ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಕೆ. ರಘುಪತಿ ಭಟ್

ಉಡುಪಿ: ಬಿಜೆಪಿ ನಾಯಕ ಕೆ. ರಘುಪತಿ ಭಟ್ ಅವರು ತಮ್ಮ ತಾಯಿ ಸರಸ್ವತಿ ಬಾರಿತ್ತಾಯ, ಧರ್ಮಪತ್ನಿ ಶಿಲ್ಪಾ ಆರ್ ಭಟ್ ಮತ್ತು ಸಹೋದರನ ಧರ್ಮಪತ್ನಿ ಜಯಶ್ರೀ ಅವರೊಂದಿಗೆ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.