ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಗಲಭೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಮಂಗಳೂರು: ಮೂಡುಶೆಡ್ಡೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು […]
ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿಯಾದ ತೃತೀಯ ಲಿಂಗಿಗಳು
ಬೆಂಗಳೂರು: ದಾವಣಗೆರೆ ಉತ್ತರ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ ತೃತೀಯ ಲಿಂಗಿಗಳು ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗವಹಿಸಿ ಮತ ಚಲಾಯಿಸಿ ಹರ್ಷ ವ್ಯಕ್ತ ಪಡಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಹಾಗೂ ಜಾನಪದ ಕಲಾವಿದೆ, ಚುನಾವಣಾ ರಾಯಭಾರಿಯಾದ ಮಂಜಮ್ಮ ಜೋಗತಿ ಮತ ಚಲಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಚೇತನ ಸ್ನೇಹಿ ಮತದಾನ ಕೇಂದ್ರ 152 ಹಾಗೂ ಕುಡುಪುವಿನ ಎಸ್.ಡಿ.ಎಂ ಮಂಗಲಜ್ಯೋತಿ ಶಾಲೆ ಮತಗಟ್ಟೆ ನಂಬರ್ 144/20 ರಲ್ಲಿ ವಿಶೇಷ ಚೇತನರಿಂದ ಮತದಾನ ಕಾರ್ಯ ನಡೆಯಿತು. […]
ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತದಾನ ಮಾಡಿದ ರಮನಾಥ ರೈ
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಬುಧವಾರ ತಮ್ಮ ಮತ ಕ್ಷೇತ್ರದಲ್ಲಿ ಮತ ಚಲಾಯಿಸುವ ಮುನ್ನ ಬಂಟ್ವಾಳ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆ: 72.67% ಮತದಾನ; ಅತಂತ್ರ ಸರಕಾರದ ಮುನ್ಸೂಚನೆ ನೀಡಿದ ಎಕ್ಸಿಟ್ ಪೋಲ್ ಗಳು
ಬೆಂಗಳೂರು: ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸರಿಸುಮಾರು 72.67% ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44% ಮತ್ತು 2013 ರಲ್ಲಿ 71.83% ಮತದಾನವಾಗಿತ್ತು. ದ.ಕ ಜಿಲ್ಲೆಯಲ್ಲಿ 76.15% ಮತದಾನವಾಗಿದ್ದರೆ, ಉಡುಪಿಯಲ್ಲಿ 78.46% ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ವಾಧಿಕ 85.83% ಮತದಾನವಾಗಿದ್ದರೆ, ಬಿ.ಬಿ.ಎಂ.ಪಿ(ದಕ್ಷಿಣ) ದಲ್ಲಿ 52.80% ಮತದಾನ ನಡೆದಿದೆ. ಮೂರು ಪ್ರಮುಖ ಎಕ್ಸಿಟ್ ಪೋಲ್ ಏಜೆನ್ಸಿಗಳು ಸೂಚಿಸಿದಂತೆ ಕರ್ನಾಟಕವು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆ ಬಹುಮತವನ್ನು ಸೂಚಿಸುತ್ತಿದ್ದರೆ ಮತ್ತೆ ಕೆಲವು ಪೋಲ್ […]