ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ: ದ.ಕ. ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ
ಮಂಗಳೂರು: ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ. ಶವ […]
ಕದ್ರಿ ದೇವಸ್ಥಾನಕ್ಕೆ ಬೈಕ್ ನೊಂದಿಗೆ ನುಗ್ಗಿದ ಮುಸ್ಲಿಂ ಯುವಕರು..
ಮಂಗಳೂರಿನ ಪ್ರಸಿದ್ಧ ದೇವಸ್ಥಾನ ಕದ್ರಿ ದೇವಾಲಯಕ್ಕೆ ಅಪರಿಚಿತ ಯುವಕರು ಬೈಕ್ ನೊಂದಿಗೆ ನುಗ್ಗಿರುವ ಘಟನೆಯೊಂದು ನಡೆದಿದೆ. ಈ ಮೂವರು ಯುವಕರನ್ನು ಸ್ಥಳೀಯರು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ. ವಶಕ್ಕೆ ಪಡೆದವರನ್ನು ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್, ಜಾಫರ್, ಫಾರೂಕ್ ಎಂದು ಗುರುತಿಸಲಾಗಿದ್ದು, ಕದ್ರಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಶಂಕಿತ ಉಗ್ರ […]
‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್..
‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ […]
ಹಣ್ಣುಗಳ ‘ರಾಜ’ ಮಾವಿನ ಹಣ್ಣಿನಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು
ಹಣ್ಣುಗಳ ರಾಜನೆಂದೇ ಖ್ಯಾತಿವೆತ್ತ ಮಾವು ನೋಡಲು ಸುಂದರ, ತಿನ್ನಲು ರುಚಿಕರ. ಮಾತ್ರವಲ್ಲ, ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳೂ ಒಂದೆರಡಲ್ಲ. ಆಮ್ರಫಲ, ಆಮ್, ಮಾವು ಎಂದು ಕರೆಯಲ್ಪಡುವ ಈ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳಿಂದಾಗಿಯೆ ಇದನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಮಾವು ಉಷ್ಣವಲಯದ ಮರವಾಗಿದ್ದು ಇದರ ವೈಜ್ಞಾನಿಕ ಹೆಸರು ಮ್ಯಾಂಗಿಫೆರಾ ಇಂಡಿಕಾ. ಇದು ಈಶಾನ್ಯ ಭಾರತ, ಬಾಂಗ್ಲಾದೇಶ ಮತ್ತು ವಾಯುವ್ಯ ಮ್ಯಾನ್ಮಾರ್ ಮೂಲದ ಸಸ್ಯವಾಗಿದೆ. ಭಾರತದಲ್ಲಿ ಬೆಳೆದ ಮಾವಿಗೆ ಪ್ರಪಂಚದಾದ್ಯಂತ ಬೇಡಿಕೆ ಇದೆ. ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳು […]
ರಾಜ್ಯದಲ್ಲಿ ಇನ್ನೆರಡು ದಿನವೂ ಭಾರೀ ಮಳೆ ಸಾಧ್ಯತೆ: ಹವಾಮಾನ ವರದಿ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗುರುವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು […]