ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ: ಜಿಲ್ಲಾಧಿಕಾರಿ ಕೃತಜ್ಞತೆ
ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ನಡೆದ ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಹಕರಿಸಿದ ಎಲ್ಲಾ ಮತದಾರರು, ಸಾರ್ವಜನಿಕರು, ರಾಜಕೀಯ ಪಕ್ಷಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಚುನಾವಣಾ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಕೃತಜ್ಞತೆಯನ್ನು ತಿಳಿಸಿದ್ದಾರೆ.
ಕಾಪು: ಗುರ್ಮೆ ಸುರೇಶ್ ಶೆಟ್ಟಿ ಅದ್ದೂರಿಯ ಸ್ವಾಗತ..
ಕಾಪು: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು 13,004 ಮತಗಳ ಅಂತರದಲ್ಲಿ ಸೋಲಿಸಿ ಗೆಲುವನ್ನು ಸಾಧಿಸಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮೇ13 ರಂದು ಸಂಜೆ ಕಾಪು ಬಿಜೆಪಿ ಕಚೇರಿಗೆ ಆಗಮಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.
ದುಃಖದಲ್ಲಿದ್ದ ಕಾರ್ಯಕರ್ತರನ್ನು ಸಮಾಧಾನಪಡಿಸಿದ ಪುತ್ತಿಲ..
ಪುತ್ತೂರು: ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ನೋವಿನಲ್ಲಿದ್ದ ಕಾರ್ಯಕರ್ತರನ್ನು ಸಮಾಧಾನಿಸಿದರು. ತಮ್ಮ ಚುನಾವಣೆಯಲ್ಲಿ ಕೊನೆಯ ಹಂತದ ವರೆಗೂ ಪೈಪೋಟಿಯನ್ನು ನೀಡಿ, 60 ಸಾವಿರಕ್ಕೂ ಅಧಿಕ ಮತದಾರರು ಬೆಂಬಲ ನೀಡುವ ಮೂಲಕ ಸಿದ್ಧಾಂತಕ್ಕೆ ಗೆಲುವು ಸಿಕ್ಕಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು. ಮುಕ್ರಂಪಾಡಿಯಲ್ಲಿರುವ ಸುಭದ್ರಾ ಸಭಾಂಗಣದಲ್ಲಿ ತಮ್ಮ ಬೆಂಬಲಿಗರ ಜತೆ ಟಿ.ವಿ. ಪರದೆ ಮೂಲಕ ಫಲಿತಾಂಶ ಬಂದ ಬಳಿಕ ಕಾರ್ಯಕರ್ತರ ಜತೆ ಮಾತನಾಡಿದರು. ಯಾವತ್ತೂ ನಿಮ್ಮ ಜತೆಗಿದ್ದೇನೆ: ಪುತ್ತಿಲ ಭರವಸೆ: ಕಾರ್ಯಕರ್ತರಿಗೆ ಕೃತಜ್ಞತೆ […]
ರಾಜಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೆ ನಳಿನ್ ಕುಮಾರ್ ಕಟೀಲ್?
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ತೆಗೆದುಕೊಂಡಿರುವ ನಳಿನ್ ಕುಮಾರ್ ಕಟೀಲ್ ಸೋಮವಾರದಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭವಿಷ್ಯ ಅನಿಶ್ಚಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂರು ಬಾರಿ ಸಂಸದರಾಗಿರುವ ಕಟೀಲ್ 2019ರ ಆಗಸ್ಟ್‌ನಲ್ಲಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಈ ಸ್ಥಾನಕ್ಕೆ ಹಲವು ಸ್ಪರ್ಧಿಗಳಿದ್ದಾಗ್ಯೂ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ […]
ಪುತ್ತೂರಿಗೆ ಪುತ್ತಿಲ ಅಭಿಯಾನದ ಬಳಿಕ ಮಂಗಳೂರಿಗೆ ಪುತ್ತಿಲ ಅಭಿಯಾನಕ್ಕೆ ಮುನ್ನುಡಿ: ಸಂಸದ ಅಭ್ಯರ್ಥಿಯಾಗಿ ಘೋಷಿಸಲು ಜನತೆಯ ಕರೆ
ಮಂಗಳೂರು: ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರೂ, ಪಕ್ಷವು ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಿದ್ದಲ್ಲದೆ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಿತು. ಈ ಹಿಂದೆ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 66607 ಮತಗಳೊಂದಿಗೆ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಇದ್ದಾಗಲೂ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಿ 62458 […]