ಮೇ 19 ರಂದು ಮಿನಿ ಉದ್ಯೋಗ ಮೇಳ
ಉಡುಪಿ: ಅದ್ವಿತ್ ಐ ಟೆಕ್ ಪ್ರೈ.ಲಿ, ಆಭರಣ ಮೋಟಾರ್ಸ್, ಸುಷ್ಮಾ ಆಟೋಮೊಬೈಲ್ಸ್, ಕಾಂಚನ್ ಅಥರ್ ಎಲೆಕ್ಟ್ರಿಕಲ್ ಹಾಗೂ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಕಂಪನಿಗಳ ವತಿಯಿಂದ ಮೇ 19 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ, ಸಂಪರ್ಕ ಜೆರಾಕ್ಸ್ ಹತ್ತಿರ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ […]
ಮಲ್ಪೆ ಬೀಚ್: ಪ್ರವಾಸಿ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ
ಉಡುಪಿ: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ಸ್ ನಿಯಮಗಳ ಅನ್ವಯ ಮೇ 16 ರಿಂದ ಸೆಪ್ಟಂಬರ್ 15 ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ-ಭಜರಂಗದಳ ಪ್ರಕರಣ: ಪಂಜಾಬ್ ನ ಸಂಗ್ರೂರ್ ಕೋರ್ಟಿನಿಂದ ಸಮನ್ಸ್
ಸಂಗ್ರೂರ್: ಹಿಂದೂ ಸುರಕ್ಷಾ ಪರಿಷತ್ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಸಲ್ಲಿಸಿರುವ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಂಜಾಬ್ನ ಸಂಗ್ರೂರ್ನ ನ್ಯಾಯಾಲಯವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ನೀಡಿದೆ. ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಪಿ.ಎಫ್.ಐ ಸಂಘಟನೆಯ ಜೊತೆ ಸಮೀಕರಿಸಿತ್ತು ಮತ್ತು ದ್ವೇಷ ಭಾವನೆಗಳನ್ನು ಪ್ರಚೋದಿಸುವ ಸಂಘಟನೆಗಳನ್ನು ನಿಷೇಧಿಸುವ […]
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವಂತೆ ಕುರುಬ ಸಮುದಾಯ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ ಹೇರಲು ಇಂದು ಬೆಂಗಳೂರಿನ ಕುರುಬರ ಸಂಘದಲ್ಲಿ ಕುರುಬ ಜನಾಂಗದ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ,ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ನಾಗರಾಜ್ ಸೇರಿದಂತೆ […]
‘ಡೆಂಗ್ಯೂ’ ಜ್ವರ ಭೀತಿ: ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹೀಗಾಗಿ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಹೇಳಿದ್ದಾರೆ. ಡೆಂಗ್ಯೂ ಹೆಚ್ಚಾಗಿ ಹರಡುವುದು ಮಳೆಗಾಲದ ಆರಂಭದಲ್ಲಿ, ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಂತಿದ್ದು, ಸೊಳ್ಳೆಗಳು ಮೊಟ್ಟೆ ಇಡಲು ಅನುವು ಮಾಡಿಕೊಟ್ಟಿದೆ. ಇದರಿಂದ ಡೆಂಗ್ಯೂ ಜ್ವರದ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಹೀಗೆ ನಿರಂತರ ಮಳೆಯಾದರೆ ಈ ಸಂಖ್ಯೆ ಇನ್ನಷ್ಟು ಅಧಿಕವಾಗುವ ಸಾಧ್ಯತೆ ಇದೆ. ಡೆಂಗ್ಯೂ ಜ್ವರ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ […]