ಮೇ 20 ರಂದು ಅಮೇಝಿಂಗ್ ಡ್ಯಾನ್ಸ್ ಕ್ರೂ ಸಂತೆಕಟ್ಟೆ ಇದರ 15 ನೇ ವರ್ಷದ ವಾರ್ಷಿಕೋತ್ಸವ
ಉಡುಪಿ: ಸಂತೆಕಟ್ಟೆಯಲ್ಲಿರುವ ಅಮೇಝಿಂಗ್ ಡ್ಯಾನ್ಸ್ ಕ್ರೂ ಇದರ 15 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮೇ 20 ರಂದು ಸಂತೆಕಟ್ಟೆಯ ನಾಗಪ್ಪ ಕಾಂಪ್ಲೆಕ್ಸ್ ನ ಮೊದಲನೆ ಮಹಡಿಯಲ್ಲಿ ಸಂಜೆ 6.30 ರ ಬಳಿಕ ವಾರ್ಷಿಕೋತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ನೃತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕೋರಿಕೊಂಡಿದ್ದಾರೆ.
ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ..
ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಚುನಾವಣಾ ರಾಜಕೀಯದಿಂದ ನಿವೃತ್ತಿ, ಪಕ್ಷ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ: ಬಿ.ರಮಾನಾಥ್ ರೈ
ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ಬಂಟ್ವಾಳದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಘೋಷಿಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತನಾದರೂ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ಸೋತರೂ ಗೆದ್ದರೂ ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾದರೂ ರಾಜ್ಯದಲ್ಲಿ ಸರ್ಕಾರ ರಚಿಸಿದ್ದೇವೆ. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ನನಗೆ ಸರ್ವಶ್ರೇಷ್ಠವಾಗಿದೆ, ಪಕ್ಷವು ನಾನು ಏನು ಮಾಡಬೇಕೆಂದು ಬಯಸುತ್ತದೋ […]
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. 2024ರ ಚುನಾವಣಾ ಕದನದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಸಂಭಾವ್ಯ ಕಾರ್ಯತಂತ್ರದ ಕುರಿತು ತೃಣಮೂಲ ಕಾಂಗ್ರೆಸ್‌ನ ನಿಲುವಿನ ಬಗ್ಗೆ ಬ್ಯಾನರ್ಜಿ ಅವರು ಮೊದಲ ಬಾರಿಗೆ ಸ್ಪಷ್ಟಪಡಿಸಿದ್ದಾರೆ. ನಾನು ಮಾಂತ್ರಿಕಳೂ ಅಲ್ಲ, ಜ್ಯೋತಿಷಿಯೂ ಅಲ್ಲ, ಭವಿಷ್ಯದಲ್ಲಿ ಏನಾಗುತ್ತದೆ? ಇದನ್ನು ಹೇಳಲು ಸಾಧ್ಯವಿಲ್ಲ ಆದರೆ ನಾನು ಒಂದು ಮಾತನ್ನು ಹೇಳಬಲ್ಲೆ, ಎಲ್ಲಿ ಪ್ರಾದೇಶಿಕ ರಾಜಕೀಯ […]
ನಾನ್-ಸ್ಟಿಕ್ ಪಾತ್ರೆಗಳಲ್ಲಿವೆ ಹಾನಿಕಾರಕ ಅಂಶಗಳು! ಎರಕಹೊಯ್ದ ಕಬ್ಬಿಣದ ಪಾತ್ರೆಯಲ್ಲಿದೆ ಹಲವಾರು ಪ್ರಯೋಜನಗಳು!
ಎರಕಹೊಯ್ದ ಕಬ್ಬಿಣದ ಅಡುಗೆ ಪಾತ್ರೆಗಳ ಶಾಖವನ್ನು ಉಳಿಸಿಕೊಳ್ಳುವ ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿವೆ. ಕಾಸ್ಟ್ ಐರನ್ ಅಥವಾ ಎರಕಹೊಯ್ದ ಕಬ್ಬಿಣದ ಅಡುಗೆ ಪಾತ್ರೆಗಳು ಇತ್ತೀಚಿನ ದಿನಗಳಲ್ಲಿ ತನ್ನ ಆರೋಗ್ಯ ಪ್ರಯೋಜನಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದೆ. ಭಾರತದಲ್ಲಿ ಬಹಳ ಹಿಂದಿನ ಕಾಲದಿಂದಲೂ ಅಡುಗೆಗಾಗಿ ಮಣ್ಣಿನ ಅಥವಾ ಪರಿಶುದ್ದ ಕಬ್ಬಿಣದಿಂದ ಮಾಡಲಾದ ಅಡುಗೆ ಪಾತ್ರೆಗಳನ್ನು ಬಳಸಲಾಗುತ್ತಿತ್ತು. ಆದರೆ ಪಾಶ್ಚಾತ್ಯ ಪ್ರಭಾವದಿಂದ ಮಣ್ಣಿನ ಮಡಕೆಗಳು ಮತ್ತು ಕಬ್ಬಿಣದ ಪಾತ್ರೆಗಳು ಮೂಲೆಗುಂಪಾಗಿ ನಾನ್ ಸ್ಟಿಕ್ ಕುಕ್ ವೇರ್ ಗಳು ಹೆಚ್ಚು ಮುನ್ನೆಲೆಗೆ ಬಂದವು. ಆದರೀಗ, […]