ರಂಗಶಿಕ್ಷಣ ಡಿಪ್ಲೋಮಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ರಂಗಾಯಣ ರಂಗಶಿಕ್ಷಣ ಕೇಂದ್ರದಲ್ಲಿ ಹತ್ತು ತಿಂಗಳ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ, ರಂಗಭೂಮಿಯ ಕುರಿತು ಪ್ರಾಥಮಿಕ ಅನುಭವ ಹೊಂದಿರುವ, ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರುವ 18 ರಿಂದ 28 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಹಾಗೂ ಮಾಹೆಯಾನ 5,000 ರೂ. ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ಉಡುಪಿ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ 5,712 ವಿದ್ಯಾರ್ಥಿಗಳು: ಪ್ರಸನ್ನ ಹೆಚ್

ಉಡುಪಿ: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, […]

ಕಟೀಲು ದೇವಳದ ಎದುರು ಹೊತ್ತಿ ಉರಿದ ಬಸ್: ಮೂವರು ಪ್ರಾಣಾಪಯದಿಂದ ಪಾರು

ಕಟೀಲು: ಇಲ್ಲಿನ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಏಕಾಏಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಧಗಧಗಿಸುವ […]

ಉಡುಪಿ: ಮೀಟರ್ ಬೋರ್ಡ್ ನಲ್ಲಿ “ಕರೆಂಟ್ ಬಿಲ್ ಕಟ್ಟಲ್ಲ” ಚೀಟಿ; ಮೆಸ್ಕಾಂಗೆ ಫಜೀತಿ

ಉಡುಪಿ: ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದಲ್ಲಿ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಪಕ್ಷವು ಗ್ಯಾರಂಟಿ ಕೊಟ್ಟಿತ್ತು. ಇದನ್ನೇ ನೆಪವಾಗಿಸಿಕೊಂಡು ಇತ್ತೀಚೆಗೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದ ನಿವಾಸಿಗಳು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಕರೆಂಟ್‌ ಬಿಲ್ ಕಟ್ಟಲ್ಲ. ನೀವು ಕಾಂಗ್ರೆಸ್ ನಾಯಕರನ್ನೇ ಕೇಳಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಬೆಸ್ಕಾಂ ಸಿಬ್ಬಂದಿಗೆ ಆವಾಜ್ ಹಾಕಿದ್ದ ಬಗ್ಗೆ ವರದಿಗಳಾಗಿದ್ದವು. ಇದೀಗ ಉಡುಪಿಯಲ್ಲಿಯೂ ಇಂತಹ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಡುಪಿಯ […]

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಪರೀಕ್ಷೆ: ಕ್ರಿಯೇಟಿವ್ ಪ.ಪೂ ಕಾಲೇಜಿನ 11 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: Institute of Company Secretary of India ಮೇ 6 ರಂದು ನಡೆಸಿದ ಅತ್ಯಂತ ಕಠಿಣ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ದ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್‌ ಹೆಗಡೆಯಾಲ್, ಧೃತಿ ಡಿ. ಶೆಟ್ಟಿ, ಕಾನಂಗಿ ಸಮೀಕ್ಷಾ ಹೆಗ್ಡೆ, ಪಾಟೀಲ್‌ ಶ್ರಾವಣಿ ಅರವಿಂದ್, ವಿಸ್ಮಯ ಹೆಚ್‌.ಎಸ್‌ ಮತ್ತು ಧೃತಿ ಆರ್‌.ಎನ್‌ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 14 […]