ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ.20 ರಿಂದ 25 ರವರೆಗೆ ವೇದಮೂರ್ತಿ ಷಡಂಗ ಶ್ರೀ ಬಿ. ಗುರುರಾಜ ತಂತ್ರಿ ಅವರ ನೇತೃತ್ವದಲ್ಲಿ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಮೇ.20 ರ ಬೆಳಿಗ್ಗೆ 12 ಕಾಯಿ ಗಣಪತಿ ಹೋಮ, ನವಗ್ರಹ ಹೋಮ, ಸಂಜೆ 5ರಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಭೋಜನ ಶಾಲೆ, ಪಾಕಶಾಲೆ, ವಸಂತ ಮಂಟಪ ಉದ್ಘಾಟನೆ ನಡೆಯಲಿದೆ. ಶ್ರೀ ಪೇಜಾವರ […]

ಉಡುಪಿ: ಪೌರ ಕಾರ್ಮಿಕ ನಾಪತ್ತೆ

ಉಡುಪಿ: ಉಡುಪಿ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಕುದ್ಮಲ್ ರಂಗರಾವ್ ನಗರದ ನಿವಾಸಿ ವಿನೋದ್ (30) ಎಂಬ ವ್ಯಕ್ತಿಯು ಮೇ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ 20 ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಮಾರ್ಗ ನಿರ್ವಹಣೆ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಬೇಳೂರು ಮತ್ತು ತೆಕ್ಕಟ್ಟೆ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿಯ ಬಾರ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಂಜುನಾಥ ಮನೋಹರ ಪೊಳೆ (31) ಎಂಬ ವ್ಯಕ್ತಿಯು ಮೇ 9 ರಿಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು […]

ಕುಂದಾಪುರ: ವಿವಾಹಿತೆ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಗರಗದ್ದೆ ನಿವಾಸಿ ಅಕ್ಷತಾ (28) ಎಂಬ ಮಹಿಳೆಯು ಮಾರ್ಚ್ 21 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ […]