ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯತ್ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತ್‌ಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ಸಬ್ಸಿಡಿ ಮೂಲಕ ಆಧಾರ […]

ಡಿಪ್ಲೋಮಾ ಪ್ರವೇಶಾತಿ: ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ. 35 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ಅರ್ಹ ವಿಶೇಷಚೇತನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org, ಪ್ರಾಂಶುಪಾಲರು, ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆ.ಎಸ್.ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು, ದೂ.ಸಂಖ್ಯೆ: 0821-2548315, […]

ಮರಗಳ ತೆರವು: ಅಹವಾಲು ಸಭೆ

ಉಡುಪಿ: 169 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾರ್ಕಳ ವಲಯ ವ್ಯಾಪ್ತಿಗೆ ಒಳಪಡುವ ಕಡಾರಿಯಿಂದ ಕಾರ್ಕಳ ಪುಲ್ಕೇರಿ ಜಂಕ್ಷನ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 1634 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ […]

ಕಾಮಗಾರಿಗೆ ಅಡಚಣೆಯಾಗುವ ಮರಗಳ ತೆರವು: ಅಹವಾಲು ಸಭೆ

ಉಡುಪಿ: ಸಾಣೂರು ಜಂಕ್ಷನ್‌ನಿಂದ ಬಿರ್ಕನಕಟ್ಟೆ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ತೋಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ 70 ಮರಗಳು, ತೆಂಕಮಿಜಾರು ಮತ್ತು ಬಡಗಮಿಜಾರು ಗ್ರಾಮದ 151 ಮರಗಳು ಹಾಗೂ ಮಾರ್ಪಾಡಿ ಗ್ರಾಮ ವ್ಯಾಪ್ತಿಯ 370 ಮರಗಳೂ ಸೇರಿದಂತೆ ಒಟ್ಟು 591 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಮೇ 29 ರಂದು ಮಧ್ಯಾಹ್ನ 3 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ […]