ರೈತರು ಪ್ರೋತ್ಸಾಹಧನ ಪಡೆಯಲು ಇ- ಕೆವೈಸಿ ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ. ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ […]

ದೆಹಲಿ ಸರ್ಕಾರ ವರ್ಸಸ್ ಲೆಫ್ಟಿನೆಂಟ್ ಗವರ್ನರ್‌: ಕೇಂದ್ರ ಸರ್ಕಾರದಿಂದ ಸುಗ್ರೀವಾಜ್ಞೆ; ಶಾಶ್ವತ ಪ್ರಾಧಿಕಾರ ಅಸ್ತಿತ್ವಕ್ಕೆ

ನವದೆಹಲಿ: ವರ್ಗಾವಣೆ ಪೋಸ್ಟಿಂಗ್, ವಿಜಿಲೆನ್ಸ್ ಮತ್ತು ಇತರ ಪ್ರಾಸಂಗಿಕ ವಿಷಯಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸುಗಳನ್ನು ಮಾಡಲು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ನ್ಯಾಶನಲ್ ಕ್ಯಾಪಿಟಲ್ ಸರ್ವಿಸ್ ಅಥಾರಿಟಿ ಅನ್ನು ಸ್ಥಾಪಿಸಿದೆ. ಕಳೆದ ವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅವರ ಅಧಿಕಾರವನ್ನು ಕಸಿದುಕೊಂಡು ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ […]

ಎಂಐಟಿ ಅಕಾಡೆಮಿಕ್ಸ್ ವಿಭಾಗದ ಶ್ರೀಮತಿ ಮನೋರಮಾ ಅವರಿಗೆ ಬೀಳ್ಕೊಡುಗೆ

ಮಣಿಪಾಲ: ಎಂಐಟಿಯಲ್ಲಿ 35 ವರ್ಷಗಳಿಂದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಇದೀಗ ಅಕಾಡೆಮಿಕ್ಸ್ ವಿಭಾಗದಿಂದ ನಿವೃತ್ತಿ ಹೊಂದಿದ್ದ ಸಿಬ್ಬಂದಿ ಶ್ರೀಮತಿ ಮನೋರಮಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಂಸ್ಥೆಯ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ, ಜಂಟಿ ನಿರ್ದೇಶಕ ಡಾ. ಸೋಮಶೇಖರ್ ಭಟ್, ಸಹ ನಿರ್ದೇಶಕ( ಅಕಾಡೆಮಿಕ್ಸ್) ಡಾ. ರವಿರಾಜ್ ಅಧಿಕಾರಿ, ಅಕಾಡೆಮಿಕ್ಸ್ ವಿಭಾಗದ ಸಹಾಯಕ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ ನಿಧನ

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥರೂ ಆಗಿರುವ ಖ್ಯಾತ ನೇತ್ರ ತಜ್ಞ ಡಾ. ಕೆ. ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ನಿನ್ನೆ(ಮೇ.19) ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. 1978 ರಲ್ಲಿ ಎಂಬಿಬಿಎಸ್ ಮಾಡಿದ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ […]

ಏನಿದು ಕ್ಲೀನ್ ನೋಟ್ ಪಾಲಿಸಿ? 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವಿಕೆ ಕಾರಣ ಹಾಗೂ ನೋಟು ಬದಲಾಯಿಸುವುದು ಹೇಗೆ? ತಿಳಿದುಕೊಳ್ಳಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂನ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದು,ಇದು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. 2016ರ ನವೆಂಬರ್‌ ತಿಂಗಳಿನಲ್ಲಿ 500 ಮತ್ತು 1,000 ರ ಹಳೆಯ ನೋಟುಗಳನ್ನು ನಿಷೇಧಿಸಿದಾಗ 2,000 ನೋಟುಗಳನ್ನು ಪರಿಚಯಿಸಲಾಯಿತು. ಆದರೆ ಇದೀಗ ಆರ್.ಬಿ.ಐ ಈ ನೋಟುಗಳನ್ನು ಹಿಂಪಡೆಯುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಆರ್.ಬಿ.ಐ ಪ್ರಕಾರ, ನೋಟ್ ಬ್ಯಾನ್ ಬಳಿಕ ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಚಲಾವಣೆಗೆ ಬಂದ ಬಳಿಕ 2018-2019 ರಲ್ಲಿ 2000 ರೂ ನೋಟುಗಳನ್ನು […]