ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನದಲ್ಲಿ ಬಹಿರಂಗಪಡಿಸುವೆ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರಿನಲ್ಲಿ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‍ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆ‌ಸ್‌ನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ […]