ವಿಷಾಹಾರ ಸೇವನೆ: ಮಂಗಳೂರು ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ರವಾನೆ ಮಾಡಿದ್ದಾರೆ ಎಂದು […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’

ಉಡುಪಿ ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ 25 ರವರೆಗೆ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 21ರ ಬೆಳಿಗ್ಗೆ ಗಂಟೆ 8.00ರಿಂದ ಸಹಸ್ರ ಪ್ರಮೋದಕ ಗಣಪತಿ ಹೋಮ, ಅಷ್ಟ ಬಂದ, ಬಿಂಬ ಶುದ್ಧಿ, ಗಣಪತಿ ದೇವರಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಗಂಟೆ 5:30 […]

ಮಂಗಳೂರು ವಿಮಾನ ದುರಂತ: ಇಂದಿಗೆ 13 ವರ್ಷ..

ಮಂಗಳೂರು: ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷವಾಗುತ್ತಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ ಫಲ್ಗುಣಿ ನದಿ ಕಿನಾರೆ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ದುರಂತದಲ್ಲಿ ಮೃತರಾದ ಕುಟುಂಬ ಸದಸ್ಯರು, ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಸಂತ್ರಸ್ಥರ ನೆನಪಿನ ಪಾರ್ಕ್ ನಲ್ಲಿ ಹೂಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. 2010ರ ಮೇ22ರ ಬೆಳಗ್ಗೆ 6.20ಕ್ಕೆ ದುಬೈಯಿಂದ ಬಂದ […]

ಇಂದ್ರಾಳಿ ಕೊರಗರ ಕಾಲನಿಗೆ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಇಂದು ಇಂದ್ರಾಳಿ ವಾರ್ಡಿನ ಮಂಜುಶ್ರೀ ನಗರದ ಕೊರಗರ ಕಾಲನಿಯ ಮನೆಗಳಿಗೆ ತೆರಳಿ ಅಹವಾಲು ಸ್ವೀಕರಿಸಿ, ಗೆಲುವಿಗೆ ಸಹಕಾರ ನೀಡಿದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯ ಅಶೋಕ್ ನಾಯ್ಕ್, ಕೊರಗ ಸಮುದಾಯದ ಪ್ರಮುಖರಾದ ಸುಂದರ ಗುರಿಕಾರ ಹಾಗೂ ಇತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್: “ಯುವನಿಧಿ”ಯೋಜನೆಗೆ ಷರತ್ತುಗಳು ಅನ್ವಯ

ರಾಜ್ಯದ ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡನ್ನು ಜನರಿಗೆ ನೀಡಿದ್ದು, ಈ ಹಿನ್ನಲೆ “ಯುವನಿಧಿ” ಯೋಜನೆ ಜಾರಿಗೆ ಕೆಲವು ಷರತ್ತುಗಳನ್ನು ರಾಜ್ಯ ಸರಕಾರ ವಿಧಿಸಿದೆ. ಗ್ಯಾರೆಂಟಿ ಕಾರ್ಡ್ ನಲ್ಲಿ ಹೇಳಿದ “ಯುವನಿಧಿ” ಯೋಜನೆವು ಪ್ರಶಕ್ತ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಎರಡು ವರ್ಷಗಳಿಗೆ ಸೀಮಿತವಾಗಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಪದವೀಧರರಿಗೆ ಮಾಸಿಕ 3 ಸಾವಿರ ರೂ. ಡಿಪ್ಲೋಮಾ ತೇರ್ಗಡೆ ಯಾದವರಿಗೆ ಮಾಸಿಕ ಒಂದುವರೆ ಸಾವಿರ ರೂ. ಭತ್ಯೆ ಪಾವತಿ ಮಾಡಲಾಗುತ್ತದೆ ಎಂದು ಕಾಂಗ್ರೆಸ್ […]