ಕೊಡವೂರು: ಹಿರಿಯ ನಾಗರಿಕರ ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ಕೊಡವೂರು: ವಾರ್ಡಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ನಡೆಯಿತು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ವತಿಯಿಂದ ಉಚಿತವಾಗಿ ನೇತ್ರ ತಪಾಸಣಾ ಶಿಬಿರವನ್ನು ಕೊಡವೂರು […]
ರೈಲು ಅಪಘಾತದಲ್ಲಿ ಎರಡು ಕಾಲು,ಬಲಗೈ ಹಾಗೂ ಎಡಗೈ ಬೆರಳು ಕಳೆದುಕೊಂಡರೂ ಯು.ಪಿ.ಎಸ್.ಸಿ ಪಾಸ್ ಮಾಡಿದ ಛಲದಂಕಮಲ್ಲ ಸೂರಜ್ ತಿವಾರಿ
ಲಕ್ನೋ: ಕೇಂದ್ರ ಲೋಕಸೇವಾ ಆಯೋಗ (UPSC) 2022 ರಲ್ಲಿ ನಡೆದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಉತ್ತರ ಪ್ರದೇಶದ ಸೂರಜ್ ತಿವಾರಿ ಯಶಸ್ವಿಯಾಗಿ ತೇರ್ಗಡೆಯಾದ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಮೈನ್ಪುರಿಯ ಸೂರಜ್ ತಿವಾರಿ 2017 ರಲ್ಲಿ ಗಾಜಿಯಾಬಾದ್ನ ದಾದ್ರಿಯಲ್ಲಿ ನಡೆದ ರೈಲು ಅಪಘಾತದಲ್ಲಿ ತನ್ನ ಎರಡೂ ಕಾಲುಗಳು ಹಾಗೂ ಬಲಗೈ ಮತ್ತು ಎಡಗೈಯ ಎರಡು ಬೆರಳುಗಳನ್ನು ಕಳೆದುಕೊಂಡಿದ್ದಾರೆ. ಆದರೂ ಎದೆಗುಂದದ ಅವರು ಯು.ಪಿ.ಎಸ್.ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿ ಇತರರಿಗೆ ಮಾದರಿಯಾಗಿದ್ದಾರೆ. ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ ಸೂರಜ್ […]
ಬಂಟ್ವಾಳ: ಬಿಜೆಪಿ-ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು
ಚುನಾವಣೋತ್ತರ ಹಿಂಸಾಚಾರದ ಆರೋಪದ ಪ್ರಕರಣದಲ್ಲಿ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಬಜರಂಗದಳ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ಬಂಟ್ವಾಳ ತಾಲೂಕಿನ ಮಾಣಿ ಬಳಿ ನಡೆದ ದಾಳಿಯಲ್ಲಿ ಬಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎಂಬುವವರಿಗೆ ಗಾಯಗಳಾಗಿವೆ. ಎರಡು ಗುಂಪುಗಳ ನಡುವಿನ ಸೇಡಿನ ಪ್ರಕ್ರಿಯೆಯಲ್ಲಿಈ ಪ್ರಕರಣ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶಂಕಿತ ದುಷ್ಕರ್ಮಿಗಳು ಓಮ್ನಿ ಕಾರಿನಲ್ಲಿ […]
ರಿಷಬ್ ಶೆಟ್ಟಿ ಹೊಸ ಹೆಜ್ಜೆ “ಕೆರಾಡಿ ಸ್ಟುಡಿಯೋಸ್” ಸ್ಥಾಪನೆ: ಚಿತ್ರಗಳ ಮಾರ್ಕೆಂಟಿಗ್ ಗಾಗಿ ಹೊಸ ವೇದಿಕೆ
ಚಿತನಟ, ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಹೆಜ್ಜೆ, ಹೊಸ ಕನಸೊಂದನ್ನು ನನಸಾಗಿಸಿದ್ದು, ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳಿಗಾಗಿ “ಕೆರಾಡಿ ಸ್ಟುಡಿಯೋಸ್” ಅನ್ನು ಸ್ಥಾಪಿಸಿದ್ದಾರೆ. ಚಿತ್ರದ ಗೆಲುವಿಗೆ ನಿರ್ಮಾಣದಷ್ಟೇ ಪ್ರಚಾರವೂ ಅತ್ಯಗತ್ಯವಾಗಿದ್ದು, ತಾವು ಹುಟ್ಟಿ ಬೆಳೆದ ಊರಾದ ಕುಂದಾಪುರದ ಸಣ್ಣ ಹಳ್ಳಿ ‘ಕೆರಾಡಿ’ಯ ಹೆಸರಿನಲ್ಲಿ ಸಂಸ್ಥೆಯನ್ನು ಸ್ಥಾಪಿಸಿದಾರೆ. ತಮ್ಮ ಹೊಸ ಪ್ರಯತ್ನಕ್ಕೆ ಚಿತ್ರರಸಿಕರ ಬೆಂಬಲವನ್ನು ಅವರು ಕೋರಿದ್ದಾರೆ.
ಮಂಗಳೂರು ಬಾಲಭವನದಲ್ಲಿ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆ ಖಾಲಿ
ಮಂಗಳೂರು: ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಮಾಸಿಕ ಗೌರವಧನ 10,000 ರೂ.ಗಳ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ 2023ರ ಜೂನ್ 6ರೊಳಗೆ ಅರ್ಜಿ ಭರ್ತಿ ಮಾಡಿ ನಗರದ ಬಿಜೈ ನಲ್ಲಿರುವ ಮೆಸ್ಕಾಂ ಹತ್ತಿರದ ಜಿಲ್ಲಾ ಸ್ರೀಶಕ್ತಿ ಭವನ 2ನೇ […]