ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ […]

ರಾಹುಲ್ ಗಾಂಧಿಯ ಹೊಸ ಪಾಸ್ ಪೋರ್ಟ್ ಮನವಿಗೆ ವಿರೋಧ ವ್ಯಕ್ತಪಡಿಸಿದ ಸುಬ್ರಮಣ್ಯನ್ ಸ್ವಾಮಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಮನವಿಯನ್ನು ವಿರೋಧಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ಗಾಂಧಿ ಪರ ವಕೀಲ ತರನ್ನುಮ್ ಚೀಮಾ ಅವರು ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ರಾಹುಲ್ ಗಾಂಧಿಗೆ ಜಾಮೀನು ನೀಡುವ ಆದೇಶದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ ಎಂದು ಕೋರ್ಟ್ ಗಮನಿಸಿದೆ. […]

ಭಂಡಾರ್ಕಾರ್ಸ್ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮ

ಕುಂದಾಪುರ: ಮೇ. 19 ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೇವಸ್ಥಾನದ ಧರ್ಮದರ್ಶಿ ರಾಮಕೃಷ್ಣ ಭಟ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಅರುಣ್ ಎ ಎಸ್, ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕ ಗಿರಿರಾಜ್ ಭಟ್ ಉಪಸ್ಥಿತರಿದ್ದರು. 90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ […]

ಉಡುಪಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

ಉಡುಪಿ: ಮೀನುಗಾರಿಕೆಗೆ ಬೊಟಿನಲ್ಲಿ ತೆರಳಿದ ಒಡಿಸ್ಸಾ ಮೂಲಕ ಮಜಾಯಿ ಮಜಿ (31) ಎಂಬಾತನು ಮೇ.11 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ವೇಳೆ ಆಯಾ ತಪ್ಪಿ ಸಮುದ್ರಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ […]

ಹೊಸ ಸಂಸತ್ ಭವನದಲ್ಲಿರಲಿದೆ ಸ್ವಾತಂತ್ರ್ಯದ ಪ್ರತೀಕವಾದ ಸೆಂಗೋಲ್: ಚೋಳ ರಾಜರ ಕಾಲದ ರಾಜದಂಡ ಹಸ್ತಾಂತರ ಪದ್ದತಿಗೆ ಪುನರ್ಜೀವ

ನವದೆಹಲಿ: ಬುಧವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂಬರುವ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್ ಸ್ಥಾನದ ಪಕ್ಕದಲ್ಲಿ ತಮಿಳುನಾಡಿನ ಐತಿಹಾಸಿಕ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಹೇಳಿದರು. “ಸೆಮ್ಮೈ” ಎಂಬ ತಮಿಳು ಪದದಿಂದ ಹುಟ್ಟಿಕೊಂಡಿರುವ ಸೆಂಗೋಲ್ ಪದದ ಅರ್ಥ “ಸದಾಚಾರ” ಎಂದಾಗಿದೆ. ಈ ರಾಜದಂಡವು ಸ್ವಾತಂತ್ರ್ಯದ ” ಐತಿಹಾಸಿಕ ಮಹತ್ವದ” ಸಂಕೇತವಾಗಿದೆ ಏಕೆಂದರೆ ಇದು ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ವರ್ಗಾವಣೆಯನ್ನು ಸೂಚಿಸುತ್ತದೆ ಎಂದು ಶಾ […]