ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ನಾಳೆ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ “ಸಹಕಾರ ಸದನ”ದ ಉದ್ಘಾಟನೆ ಸಮಾರಂಭ

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ ಸಹಕಾರ ಸದನವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಮೇ 27ರಂದು ಬೆಳಿಗ್ಗೆ 10ಕ್ಕೆ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ಟಿ.ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ದೀಪ ಪ್ರಜ್ವಲನೆ ಮಾಡಲಿದ್ದಾರೆ. ತೊಟ್ಟಂ ಸೈಂಟ್ ಅನ್ಸ್ ಚರ್ಚ್ ಧರ್ಮಗುರು ರೆ|ಫಾ|ಡೆನಿಸ್ ದೇಸಾ […]

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು […]

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇ-ಮೇಲ್ ವಿಳಾಸ ಬದಲಾವಣೆ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಕಚೇರಿಯ ಇ-ಮೇಲ್ ವಿಳಾಸ [email protected] ಅನ್ನು ಹೊಸದಾಗಿ ಸೃಜಿಸಲಾಗಿದ್ದು, ಇನ್ನು ಮುಂದೆ ಎಲ್ಲಾ ಪತ್ರಗಳನ್ನು ಈ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರಿಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್’

ಮಂಗಳೂರು: ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದ‌ರ್ ತೆರೇಸಾ ಮೆಮೋರಿಯಲ್ ನ್ಯಾಶನಲ್ ಅವಾರ್ಡ್‌’ಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಆಯ್ಕೆಯಾಗಿದ್ದಾರೆ.

ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಅಧಿಕಾರಿಗಳಿಗೆ ನೇತ್ರ ಸಂಬಂಧಿ ಕಾಯಿಲೆ- ಅಂಧತ್ವ ನಿಯಂತ್ರಣ ಕುರಿತು ಕಾರ್ಯಾಗಾರ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಿತ್ತು. ಕಾರ್ಯಾಗಾರದಲ್ಲಿ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಶಿಕ್ಷಣ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಶಿಕ್ಷಣ ನೀಡಲಾಯಿತು. ಮಾಹೆ ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ನಡೆದ […]