ನೂತನ ಸಂಸತ್ ಭವನ ಕಟ್ಟಡದಲ್ಲಿ “ಸೆಂಗೋಲ್” ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಬೆಳಿಗ್ಗೆ ಹೊಸ ಸಂಸತ್ ಸದನದ ಆವರಣಕ್ಕೆ ಆಗಮಿಸಿದ ಮೋದಿ, ಮಹಾತ್ಮ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ನೂತನ ಕಟ್ಟಡದ ಉದ್ಘಾಟನೆಯ ಪೂಜೆಯಲ್ಲಿ ಪಾಲ್ಗೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಕಟ್ಟಡಾದ ಉದ್ಘಾಟನೆ ನಡೆಸಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನದ ಉದ್ಘಾಟನೆಗೆ ಚಾಲನೆ ನೀಡಿದರು. ನೂತನ ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನ […]

ಕರಂಬಳ್ಳಿ: ಕೃಷಿ ಸಮ್ಮೇಳನ- ಫಲಪುಷ್ಪ ಪ್ರದರ್ಶನ ಉದ್ಘಾಟನೆ

ಕರಂಬಳ್ಳಿ: ಉಡುಪಿ ಜಿಲ್ಲಾ ಕೃಷಿಕ ಸಂಘ ಕರಂಬಳ್ಳಿ ವಲಯ, ಉಡುಪಿ ಜಿಲ್ಲಾ ಕೃಷಿಕ ಸಂಘ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇ 27 ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾದ “ಕೃಷಿ ಸಮ್ಮೇಳನ, ಫಲಪುಷ್ಪ ಪ್ರದರ್ಶನ, ಕೃಷಿ ವಸ್ತು ಪ್ರದರ್ಶನ” ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಹಾಗೂ ಅವರ ತಾಯಿ ಸರಸ್ವತಿ ಬಾರಿತ್ತಾಯ ಉದ್ಘಾಟಿಸಿದರು.

ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬ: ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಕಾರ್ಡ್ ಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದು 1 ವಾರ ಕಳೆದರೂ ಜಾರಿ ಮಾಡದೇ ಇರುವುದನ್ನು ಜಿಲ್ಲಾ ಬಿಜೆಪಿ ಖಂಡಿಸಿದೆ. ಶನಿವಾರದಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಡೆಯನ್ನು ಖಂಡಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ […]