‘ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು

ಉಡುಪಿ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ ‘ನಾವೇನೂ ಬಳೆ ತೊಟ್ಟಿಲ್ಲ’ ಎಂದಿರುವ ಕ್ಷುಲ್ಲಕ ವಿಚಾರವನ್ನು ದೊಡ್ಡ ವಿವಾದವನ್ನಾಗಿಸಲು ಹೊರಟಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಯವರ ನಡೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ತಿರುಗೇಟು ನೀಡಿದ್ದಾರೆ. ಉಚಿತ […]

ಕೆಳಪರ್ಕಳದಲ್ಲಿ ಕಾರುಗಳ ನಡುವೆ ಮುಖಾಮುಖಿ ಅಪಘಾತ: ಪ್ರಯಾಣಿಕರು ಅಪಾಯದಿಂದ ಪಾರು

ಕೆಳಪರ್ಕಳ ತಿರುವಿನಲ್ಲಿ ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ 4 ಗಂಟೆಗೆ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಮಾರುತಿ ರಿಡ್ಜ್ ಕಾರು, ಮಣಿಪಾಲದಿಂದ ಪರ್ಕಳದ ಕಡೆಗೆ ಬರುತ್ತಿದ್ದ ಟಾಟಾ ನೆಕ್ಸನ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮಾರುತಿ ರಿಡ್ಸ್ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಟಾಟಾ ನೆಕ್ಸಾನ್ ಕಾರಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಬಳಿಕ ಎರಡು ಕಾರಿನವರು ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ಬೈಂದೂರು: ಉದ್ಯೋಗ ಸಿಗಲಿಲ್ಲವೆಂದು ಯುವತಿ ನೇಣಿಗೆ ಶರಣು

ಬೈಂದೂರು: ಉದ್ಯೋಗ ಸಿಗಲಿಲ್ಲವೆಂದು ನಿರಾಸೆಗೊಂಡಿದ್ದ ಯುವತಿಯೊಬ್ಬಳು ಮೇ.೨೭ ರಂದು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಕಲ್ತೋಡು ಗ್ರಾಮದ ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಪುತ್ರಿ ಗೌತಮಿ (22) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮಾಡಿರುವ ಗೌತಮಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಅರ್ಜಿ ಹಾಕಿದ್ದರೂ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಹತಾಶಳಾದ ಆಕೆ ತನ್ನ ಮನೆಯ ಮೊದಲನೆ ಮಹಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಯುವತಿಯು […]

ಮಂಗಳೂರು: ಒಳ ಉಡುಪಿನಲ್ಲಿಟ್ಟು 1.69 ಕೋಟಿ ರೂ ಮೌಲ್ಯದ ವಜ್ರ ಅಕ್ರಮ ಸಾಗಾಟ ಯತ್ನ; ವ್ಯಕ್ತಿ ಸೆರೆ

ಮಂಗಳೂರು: ದಿನಂಪ್ರತಿ ಅಕ್ರಮ ಚಿನ್ನ ಸಾಗಾಟದ ಘಟನೆಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುತ್ತವೆ. ಆದರೀಗ ವ್ಯಕ್ತಿಯೋರ್ವ ತನ್ನ ಒಳ ಉಡುಪಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ಮೇ 25ರಂದು ದುಬೈಗೆ ತೆರಳಬೇಕಿದ್ದ ವ್ಯಕ್ತಿಯೋರ್ವ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದು, ಆತನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು […]

ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ರೋಗಿಗಳಿಂದ ಪ್ರತಿಭಟನೆ: ಶಾಸಕರಿಂದ ಸ್ಪಂದನೆ

ಉಡುಪಿ: ಸೋಮವಾರದಂದು ಜಿಲ್ಲಾಸ್ಪತೆಯ ವಠಾರದಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ಕೋರಿ ರೋಗಿಗಳಿಂದ ಪ್ರತಿಭಟನೆ ನಡೆಯಿತು. ಆಸ್ಪತ್ರೆಯ ವಠಾರದಲ್ಲಿ ಜಮಾಯಿಸಿದ ರೋಗಿಗಳು ಸಮಸ್ಯೆಯನ್ನು ಸರಿಪಡಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಂಗ್ರೆಸ್ ಮುಖಂಡ ಕೆ ಕೃಷ್ಣಮೂರ್ತಿ ಆಚಾರ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಶೀಘ್ರವೇ ಪರಿಹರಿಸುವುದಾಗಿ ರೋಗಿಗಳಿಗೆ ಭರವಸೆ ನೀಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ […]