ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ
ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ […]
ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕುವವರ ವಿರುದ್ದ ಕಠಿಣ ಕ್ರಮ: ಅಕ್ಷಯ್ ಮಚ್ಚೀಂದ್ರ
ಉಡುಪಿ: ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 33 ಕಾರುಗಳ ಟಿಂಟ್ ಗ್ಲಾಸ್ ಗಳನ್ನು ಮತ್ತು 21 ವಾಹನಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದರು. ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕಿದವರು ಕೂಡಲೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಅಲ್ಲದೆ, ದ್ವಿಚಕ್ರ ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಅಳವಡಿಸಿ ಕರ್ಕಶ ಶಬ್ದ ಮಾಡಿ […]
ಆದಾಯ ತೆರಿಗೆ ಪಾವತಿಸುವವರಿಗೆ, ಸರ್ಕಾರಿ ನೌಕರರಿಗಿಲ್ಲ ಕಾಂಗ್ರೆಸ್ ಗ್ಯಾರಂಟಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯವಾಗಲಿದ್ದು, ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಆಗುವುದಿಲ್ಲ. ನಿರ್ಗತಿಕರು ಹಾಗೂ ಬಡವರನ್ನು ಗುರುತಿಸಿ ಯೋಜನೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಸ್ವಲ್ಪ ವಿಳಂಬವಾಗಬಹುದು. ಆದರೆ ಕೊಟ್ಟ ಭರವಸೆ ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಭಾನುವಾರದಂದು ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲಮಂಟಪ ಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ […]
ಐಪಿಎಲ್ ಫೈನಲ್: ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗುವರು ಚಾಂಪಿಯನ್ ?
ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದೆ. ನಿನ್ನೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಬಂದಿದ್ದ 1,32,000ಕ್ಕು ಮಿಕ್ಕಿ ಪ್ರೇಕ್ಷಕರು ನಿರಾಸೆ ಅನುಭವಿಸಿದ್ದಾರೆ. ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆ […]
ಕೊಡವೂರು: ಮನೆ ಮನೆಗೆ ನೀರು ವಿತರಿಸುವ ಮಾದರಿ ಕಾರ್ಯ
ಉಡುಪಿ: ನೀರಿನ ಕೊರತೆಯಿಂದಾಗಿ ನಗರಸಭೆ ವತಿಯಿಂದ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಕಾರ್ಯ ನಡೆಯುತ್ತಿದೆ. ಕೊಡವೂರು ವಾರ್ಡಿನಲ್ಲಿ ನೀರಿನ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ನಾಗರಿಕರಿಗೆ ನೀರಿನ ಸಮಸ್ಯೆ ಬಂದಾಗ ತಿಳಿಸಿದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆ ಕೊಡವೂರು ವಾರ್ಡಿನಲ್ಲಿ ನಡೆಯುತ್ತಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರಲ್ಲಿ ಅಚ್ಚುಕಟ್ಟಾದ ನಿರ್ವಹಣೆ ಕೊಡುವೂರಿನಲ್ಲಿ ನಡೆದಿದ್ದು ಪಂಪ್ ಆಪರೇಟರ್ ಆಗಿರುವಂದಾಮೋದರ್ ಮತ್ತು ನಿತೀಶ್ ಪಾಲಕಟ್ಟೆ ಇವರ ಕಾರ್ಯವು ಉತ್ತಮವಾಗಿ ನಡೆಯುತ್ತಿದೆ. ನೀರಿನ ಸಮಸ್ಯೆ ಇರುವವರು […]