ಕುಂದಾಪುರ: ಯುವತಿ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ. 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕುಳ್ಳಗಿನ ಶರೀರ, ಬಿಳಿ ಮೈ ಬಣ್ಣ, ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು, ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದು, ನೀಲಿ ಬಣ್ಣದ ಚೂಡಿದಾರ ಟಾಪ್. ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು. ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ […]

ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್ 

ಕಾರ್ಕಳ : ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡಿದಂತೆ ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡ […]

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಮತಿ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಪಿಎಲ್‌ ಅಥವಾ ಬಿಪಿಎಲ್‌ ಅಂತ ಹೇಳಿಲ್ಲ. ಹಾಗಾಗಿ, ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಎಂದು ಅವರು ತಿಳಿಸಿದರು. ಮೇ.29 ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ […]

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರನಟ ಸುನಿಲ್ ಶೆಟ್ಟಿ

ಪಡುಬಿದ್ರೆ: ಮಂಗಳವಾರದಂದು ಹಿಂದಿ ಚಿತ್ರನಟ ಸುನಿಲ್ ಶೆಟ್ಟಿ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ಜನರ ಜೊತೆ ಬೆರೆದ ಅವರು ಮಾತೃ ಭಾಷೆ ತುಳುವಿನಲ್ಲಿ ನಿರರ್ಗಳವಾಗಿ ಮಾತಾಡಿದ್ದು, ತುಳುನಾಡಿನ ಸಂಪ್ರದಾಯಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡದ್ದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ಉಡುಪಿ: ಗೇರು ಬೀಜ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಉಡುಪಿ: ಗೇರುಬೀಜ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗೇರು ಬೀಜ ತುಂಬಿದ್ದ ಲಾರಿ ಬಲಾಯಿಪಾದೆ ಜಂಕ್ಷನ್ ನಲ್ಲಿ ಪಲ್ಟಿಯಾಗಿದೆ. ಲಾರಿಯ ಚಾಲಕ ಮತ್ತು ಸಹಾಯಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.