ಉಡುಪಿ: ಪೋಷಕರ ಪತ್ತೆಗೆ ಮನವಿ
ಉಡುಪಿ: ಜಿಲ್ಲೆಯ ಕೃಷ್ಣಾನುಗೃಹ ದತ್ತು ಕೇಂದ್ರದಲ್ಲಿ ವಾಸವಿರುವ ಏಸ್ತರ್ (7) ಎಂಬ ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದ್ದು. ಮಗುವಿನ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಘಟಕ ರಜತಾದ್ರಿ ಉಡುಪಿ. ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಂಭ್ರಮದಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು
ರಾಜ್ಯದಾದ್ಯಂತ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅಂತ್ಯವಾಗಿದ್ದು, ಶಾಲೆ ಪ್ರಾರಂಭವಾಗಿದೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಒಂದಷ್ಟು ಮಾರ್ಗಸೂಚನೆಗಳನ್ನು ನೀಡಿದೆ. ಅದರಲ್ಲಿ ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಹಾಗೆಯೇ ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಅದರಂತೆ ಎಲ್ಲಾ ಶಾಲೆಯಲ್ಲೂ ಸಂಭ್ರಮ ಆಚರಣೆ ನಡೆದಿದೆ. ಮಕ್ಕಳನ್ನು ಶಾಲೆಯ ಶಿಕ್ಷಕರು, ಗ್ರಾಮಸ್ತರು ಸ್ವಾಗತಿಸಿದರು.
ತ್ರಿಶಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ಕಾರ್ಯಾಗಾರ
ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ, ನಾಯಕತ್ವದ ಗುಣ ಮತ್ತು ಪ್ರೇರಣೆಯ ಕುರಿತಾದ ಕಾರ್ಯಾಗಾರವು ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮೇಜರ್ ರಾಧಾಕೃಷ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಯುವ ಜನಾಂಗದಲ್ಲಿ ಶಿಸ್ತು ಬಹಳ ಮುಖ್ಯ ಹಾಗೂ ಸತತ ಪ್ರಯತ್ನದಿಂದ ಜೀವನದಲ್ಲಿ ಗೆಲುವು ಸಾಧ್ಯ ಎನ್ನುವುದನ್ನು ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. […]
ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ
ಕುಂದಾಪುರ: ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಟಪಾಡಿ ಹಾಗೂ ಗ್ರಾಮ ಪಂಚಾಯತ್ ಹಂದಾಡಿ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಶ್ರೀನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಮೆರವಣಿಗೆ ನಡೆಸಲಾಯಿತು. ಸ್ಥಳೀಯ ಅಂಗಡಿಗಳಿಗೆ ಹೂಗಳನ್ನು ನೀಡುವ ಮೂಲಕ ತಂಬಾಕು ಮಾರಾಟ ನಿಷೇಧದ ಬಗ್ಗೆ ಹೇಳಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶೈಲಜ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶೋಭಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಚಿಕ್ಕಮಗಳೂರು: ಹಾವು ಹಿಡಿಯುತ್ತಿದ್ದ ಸ್ನೇಕ್ ನರೇಶ್ ತಾನೇ ಹಿಡಿದ ನಾಗರಹಾವು ಕಚ್ಚಿ ಮೃತ
ಚಿಕ್ಕಮಗಳೂರು: ಇಲ್ಲಿನ ಹಾವು ಹಿಡಿಯುವ ಸ್ನೇಕ್ ನರೇಶ್ ಎಂಬ ವ್ಯಕ್ತಿಯು ತಾವೇ ಹಿಡಿದ ನಾಗರಹಾವು ಕಚ್ಚಿ ಮಂಗಳವಾರ ಮೃತಪಟ್ಟಿದ್ದಾರೆ. ನರೇಶ್ (55) ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಬೆಳಗ್ಗೆ ನಾಗರಹಾವು ಹಿಡಿದು ರಕ್ಷಣೆ ಮಾಡಿ ಸ್ಕೂಟಿಯಲ್ಲಿ ಇಟ್ಟು ಮತ್ತೊಂದು ಹಾವಿದೆ ಎಂದು ಹಿಡಿಯಲು ಹೊರಟ್ಟಿದ್ದರು. ಈ ವೇಳೆ ಸ್ಕೂಟಿಯ ಸೀಟ್ ತೆಗೆದು ಹಾವಿದ್ದ ಚೀಲ ಸರಿಪಡಿಸಲು ಮುಂದಾದಾಗ ನಾಗರಹಾವು ನರೇಶ್ ಅವರ ಕೈಗೆ ಕಚ್ಚಿದೆ. ಹಾವು ಕಚ್ಚಿದ ತಕ್ಷಣವೇ ಸ್ಥಳೀಯರು ನರೇಶ್ […]