ಹೊಸ ಸರ್ಕಾರ ಯಾವುದೇ ತನಿಖೆ ಮಾಡಬಹುದು, ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ. ನಾನೇ ಹಿಂದೆ […]
ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಪರಿಸ್ಥಿತಿ ಪ್ರಥಮ ಪ್ರತಿಕ್ರಿಯೆ ತರಬೇತಿ ಕಾರ್ಯಾಗಾರ
ಮಣಿಪಾಲ: ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮೇ . 30 ರಂದು ಡಾ. ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ ಭಾಗವಹಿಸಿ ಮಾತನಾಡಿ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ಮತ್ತು ತುರ್ತು ಸಂದರ್ಭಗಳಲ್ಲಿ […]
ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ
ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]
75 ದಿನಗಳ ದಾಖಲೆ ಅವಧಿಯಲ್ಲಿ ರನ್ ವೇ ರಿ-ಕಾರ್ಪೆಟಿಂಗ್ ಪೂರ್ಣಗೊಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ!
ಮಂಗಳೂರು: ಜನವರಿ 27 ರಂದು 2.45 ಕಿಮೀ ಉದ್ದದ ರನ್ವೇ 06-24 ರ ರಿ-ಕಾರ್ಪೆಟಿಂಗ್ ಕಾಮಗಾರಿಯನ್ನು ಆರಂಭಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 28 ರಂದು ತನ್ನ ವೇಳಾಪಟ್ಟಿಗಿಂತ ಮುಂಚಿತವಾಗಿ ಕೆಲಸವನ್ನು ಪೂರ್ಣಗೊಳಿಸಿದೆ. ಇದರೊಂದಿಗೆ ಜೂನ್ 1 ರಿಂದ ಹಳೆಯ ವೇಳಾಪಟ್ಟಿಗನುಗುಣವಾಗಿ ವಿಮಾನ ಸಂಚಾರ ನಡೆಯಲಿದೆ. ವಿಮಾನ ನಿಲ್ದಾಣದ ರನ್ವೇಗಳನ್ನು ನಿಖರವಾದ, ಅಂತರಾಷ್ಟ್ರೀಯವಾಗಿ ಕಡ್ಡಾಯವಾದ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಲಾಗುತ್ತದೆ. ಆದರೆ ಆಗಾಗ್ಗೆ ಲ್ಯಾಂಡಿಂಗ್ ಮತ್ತು ಟೇಕ್-ಆಫ್ ಆಗುವ ವಿಮಾನಗಳು ರನ್ ವೇಗಳ ಸವೆತಕ್ಕೆ ಕಾರಣವಾಗುತ್ತವೆ. ಮಳೆ […]
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಏರಿಕೆ
ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು 4% ಹೆಚ್ಚಿಸಿ ಆದೇಶ ಹೊರಡಿಸಿದೆ. 2023ರ ಜನವರಿ ತಿಂಗಳಿನಿಂದಲೇ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದುವರೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 31 ಇದ್ದು, ಇದೀಗ ಇದು ಶೇ. 35 ಕ್ಕೆ ಏರಿಕೆಯಾಗಿದೆ.