ಉತ್ತಮ ಸಾಧನೆ ಮಾಡಿರುವ ಶಾಲೆಗಳಿಂದ ಪ್ರತಿಷ್ಠಿತ ಶಾಲೆ ಮಾನ್ಯತೆಗಾಗಿ ಅರ್ಜಿ ಆಹ್ವಾನ
ಉಡುಪಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುಂಬರಲು ಸಹಾಯವಾಗುವಂತೆ ಜಿಲ್ಲೆಯಲ್ಲಿನ ಪ್ರತಿಷ್ಟಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಕಲ್ಪಿಸಿ ಪಿಯುಸಿ ವ್ಯಾಸಂಗದವರೆಗೆ ಶಿಕ್ಷಣ ಕಲ್ಪಿಸಲು ಸರಕಾರದಿಂದ ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ, ಭೋದನೆ, ಗ್ರಂಥಾಲಯ, ಪ್ರಯೋಗಾಲಯ ,ಕ್ರೀಡಾ ಚಟುವಟಿಕೆ, ಕಳೆದ 3 ವರ್ಷಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಶೇ 100 ಫಲಿತಾಂಶ ಹೊಂದಿರುವ ಶಾಲೆಗಳನ್ನು ಪ್ರತಿಷ್ಠಿತ […]
ಉಡುಪಿ: ಜೂನ್ 7 ರಂದು ಅಂಚೆ ಅದಾಲತ್
ಉಡುಪಿ : ಉಡುಪಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂನ್ 7 ರಂದು ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂನ್ 5 ರೊಳಗೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ಚರ್ಚಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಉಡುಪಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಂಚು ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಸಿಐಟಿಯು ಧ್ವಜಾರೋಹಣ
ಕುಂದಾಪುರ: ಇಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರದ ಎಲ್ಲಾ ಹತ್ತು ಹಂಚು ಕಾರ್ಖಾನೆಗಳಲ್ಲಿ ಕೆಲಸಕ್ಕೂ ಮುನ್ನ ಕಾರ್ಖಾನೆ ಎದುರುಗಡೆ ಧ್ವಜಾರೋಹಣ ಮಾಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸಿಐಟಿಯು ಮುಖಂಡ ಎಚ್ ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕೀಸ್, ರಾಜು ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು. ಬೈಂದೂರು ಸಿಐಟಿಯು ಕಚೇರಿಯಲ್ಲಿ ಸಿಐಟಿಯು ಧ್ವಜಾರೋಹಣ ಶ್ರೀಧರ ಉಪ್ಪುಂದ ನೆರವೇರಿಸಿದರು. ಸಿಐಟಿಯು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಹಾಜರಿದ್ದರು.
ರಾಷ್ಟಮಟ್ಟದ ಅಥ್ಲೀಟ್ ಹಾಗೂ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಅಭಿನಂದನಾ ಕಾರ್ಯಕ್ರಮ
ಉಡುಪಿ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ ಪುರಭವನದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಆರೋಗ್ಯ ಇಲಾಖೆಯಲ್ಲಿ 34 ವರ್ಷಗಳ […]