ಆಕಾಶದಲ್ಲಿ ಶುಕ್ರ-ಮಂಗಳ ಸಂಯೋಗ: ಈ ರಾಶಿಗಳವರಿಗೆ ನೀಡಲಿದೆ ಶುಭ ಫಲ

ಒಂದು ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುವಾಗ ಅದರ ಪರಿಣಾಮವು ಎಲ್ಲಾ 12 ರಾಶಿಗಳ ಮೇಲೆ ಬೀಳುತ್ತದೆ. ಗ್ರಹಗಳ ಚಲನೆಯ ಪ್ರಭಾವವು ಶುಭಾಶುಭ ಫಲಗಳೆರಡನ್ನೂ ನೀಡಬಹುದು. ಶುಕ್ರ ಮತ್ತು ಮಂಗಳ ಸಂಯೋಗದ ಪರಿಣಾಮವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಸ್ಥಳೀಯರ ಮೇಲೆ ಬೀಳಲಿದ್ದು, ಈ ಕೆಳಗಿನ ರಾಶಿಗಳಿಗೆ ಶುಭ ಫಲಗಳು ಗೋಚರವಾಗಲಿವೆ ಮೇಷ ಶುಕ್ರ ಮತ್ತು ಮಂಗಳನ ಸಂಯೋಗವು ಮೇಷ ರಾಶಿಯವರಿಗೆ ಅತ್ಯುತ್ತಮ ಫಲಿತಾಂಶಗಳನ್ನು ನೀಡಲಿದೆ. ಈ ಸಮಯವು ವಿಶೇಷವಾಗಿ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಮೇಷ ರಾಶಿಯವರಿಗೆ […]

ಕೊಡವೂರು: ಹಗಲಿರುಳು ನೀರು ವಿತರಿಸಿದ ಕಾರ್ಯಕರ್ತರಿಗೆ ಗೌರವ

ಕೊಡವೂರು: ನೀರಿನ ಅಭಾವದಿಂದ ನಾಗರಿಕರಿಗೆ ತೊಂದರೆಯಾಗುವುದನ್ನು ಗಮನಿಸಿ ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಮತ್ತು ನಾಗರಿಕರು ಒಟ್ಟಾಗಿ ಪ್ರತ್ಯೇಕವಾದ ತಂಡವನ್ನು ರಚನೆ ಮಾಡಿಕೊಂಡಿದ್ದು, ನಗರಸಭೆಯ ನೀರು ಪೂರೈಕೆಯಾಗದ ಸಂದರ್ಭದಲ್ಲಿ ನಗರಸಭೆ ಮತ್ತು ವಾರ್ಡ್ ಅಭಿವೃದ್ದಿಯ ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ ಮಾಡಲಾಯಿತು. ನೀರು ಪೂರೈಸುವ ಜವಾಬ್ದಾರಿಯನ್ನು ನಿರ್ವಹಿಸಿ ರಾತ್ರಿ ಹಗಲೆನ್ನದೆ ನೀರು ಸರಬರಾಜು ಮಾಡುವ ಪಂಪ್ ಆಪರೇಟರ್ ದಾಮೋದರ್ ಮತ್ತು ನಿತೇಶ್ ಇವರನ್ನು ಕೊಡವೂರಿನ ನಾಗರಿಕರು ಮತ್ತು ವಾರ್ಡ್ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಅಶೋಕ್ ಶೆಟ್ಟಿಗಾರ್ […]

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಷಾ ಸಂಧ್ಯಾ ಕಾಲೇಜು ಕಟಪಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಮೇ 27 ರಂದು ಕಟಪಾಡಿಯ ಪಳ್ಳಿಗುಡ್ಡೆ ಮೈದಾನದಲ್ಲಿ ನೆರವೇರಿತು. ಮುಖ್ಯ ಅತಿಥಿ, ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಹಾಗು ಫೀಲ್ಡ್ ಇವೆಂಟ್ಸ್ ಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತ್ರಿಷಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ|ಇಂದುರೀತಿ, ದೈಹಿಕ ಶಿಕ್ಷಣ ಶಿಕ್ಷಕ ಶಶಿಕಿರಣ್ […]

ಮಂಗಳೂರು: ಸರ್ಕಾರಿ ವಕೀಲರ ಹುದ್ದೆಗಾಗಿ ಅರ್ಜಿ ಅಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಅರ್ಜಿ ಪಡೆದು, ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿ ಸಲ್ಲಿಸಬೇಕು. ವಿಶೇಷ ಅರ್ಹಹತೆಗಳಿದ್ದರೆ […]

ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್‌ಸಿ ಮಹದೇವಪ್ಪ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]