ಕಾಪು: ಅದಮಾರು ಶ್ರೀಗಳಿಂದ ಗೋ ರುದ್ರಭೂಮಿ ನಿರ್ಮಾಣ ಕಾರ್ಯದ ಭೂಮಿ ಪೂಜೆ
ಕಾಪು: ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು ಶುಕ್ರವಾರದಂದು ಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ, ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಗೆ ಭೂಮಿ ಪೂಜೆ ಮೂಲಕ ಅಡಿಗಲ್ಲು […]
ಒಡಿಶಾದಲ್ಲಿ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ: ಕನಿಷ್ಠ 238 ಸಾವು; 650 ಕ್ಕೂ ಹೆಚ್ಚು ಜನ ಗಾಯಾಳು
ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ನಿನ್ನೆ ಸಂಜೆ ಭೀಕರ ಅಫಘಾತದಲ್ಲಿ ಮೂರು ರೈಲುಗಳು ಪರಸ್ಪರ ಡಿಕ್ಕಿಯಾಗಿ ಕನಿಷ್ಠ 233 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಡು ವರದಿಯಾಗಿದೆ. ಕೋರಮಂಡಲ್ ಶಾಲಿಮಾರ್ ಎಕ್ಸ್‌ಪ್ರೆಸ್ ಎಂಬ ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಂಬ ಮತ್ತೊಂದು ರೈಲು ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ […]
ತ್ರಿಶಾ ಕಾಲೇಜು ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕಕ್ಕೆ ಭೇಟಿ
ಕಟಪಾಡಿ: ಮೇ 31ರಂದು ತೃತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಕಾರ್ಕಳದಲ್ಲಿರುವ ಬೋಳಾಸ್ ಆಗ್ರೋ ಪ್ರೈ. ಲಿಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಜೊತೆಗೆ ಬ್ರಹ್ಮಾವರದ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು ವಿದ್ಯಾರ್ಥಿಗಳು ಸಂಬಂಧಗಳ ಬೆಲೆಯನ್ನು ತಿಳಿದುಕೊಳ್ಳುವಂತೆ ಮಾಡಲಾಯಿತು. ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ತಮ್ಮ ಕೈಗಾರಿಕಾ ಭೇಟಿ ಹಾಗೂ ವೃದ್ಧಾಶ್ರಮದ ಭೇಟಿಯ ಅನುಭವದ ವರದಿಯನ್ನು ಕಾಲೇಜಿಗೆ ಸಲ್ಲಿಸಿದರು ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರು ಜೊತೆಗೂಡಿದರು.