ನಿಮೆಸುಲೈಡ್ ಮತ್ತು ಪ್ಯಾರೆಸಿಟಮಾಲ್ ಮಾತ್ರೆ ಸೇರಿದಂತೆ 14 ಎಫ್ಡಿಸಿ ಔಷಧಿಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರ
ನವದೆಹಲಿ: ನಿಮೆಸುಲೈಡ್ ಮತ್ತು ಪ್ಯಾರೆಸಿಟಮಾಲ್ ಮಾತ್ರೆಗಳು ಮತ್ತು ಕ್ಲೋರ್ಫೆನಿರಮೈನ್ ಮಲೇಟ್ ಮತ್ತು ಕೊಡೈನ್ ಸಿರಪ್ ಸೇರಿದಂತೆ 14 ಫಿಕ್ಸೆಡ್ ಡೋಸ್ ಸಂಯೋಜನೆಯ ಔಷಧಗಳು ಜನರಿಗೆ ಅಪಾಯವನ್ನುಂಟುಮಾಡುತ್ತವೆ ಎಂದು ಕೇಂದ್ರ ಸರ್ಕಾರವು ನಿಷೇಧಿಸಿದೆ. ಈ ಫಿಕ್ಸ್ಡ್ ಡೋಸ್ ಕಾಂಬಿನೇಶನ್ (ಎಫ್ಡಿಸಿ) ಔಷಧಿಗಳಿಗೆ “ಯಾವುದೇ ಚಿಕಿತ್ಸಕ ಸಮರ್ಥನೆ” ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ಹೇಳಿದೆ. ಎಫ್ಡಿಸಿ ಔಷಧಿಗಳೆಂದರೆ ಎರಡು ಅಥವಾ ಹೆಚ್ಚು ಸಕ್ರಿಯ ಔಷಧೀಯ ಪದಾರ್ಥಗಳು ಒಂದು ಸ್ಥಿರ ಅನುಪಾತದಲ್ಲಿ ಸಂಯೋಜನೆಯನ್ನು ಒಳಗೊಂಡಿರುತ್ತದೆ. ತಜ್ಞರ ಸಮಿತಿಯ […]
ಒಡಿಶಾ ರೈಲು ದುರ್ಘಟನೆ: ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ
ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಳಗಾದವರನ್ನು ಶನಿವಾರ ಭೇಟಿ ಮಾಡಿದ ಪ್ರಧಾನಿ ಮೋದಿ, ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು. “ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಅವರು ಹೇಳಿದರು. ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸರಕಾರ ಬೆಂಬಲವಾಗಿ ನಿಂತಿದೆ ಎಂದು ಅವರು ಭರವಸೆ ನೀಡಿದರು. ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ […]
ಬಿಜೆಪಿ ಅವಲೋಕನ ಸಭೆ: ಯಶ್ ಪಾಲ್ ಸುವರ್ಣ ಭಾಗಿ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾನುವಾರದಂದು ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು. ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಮಂಡಲ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ […]
ಕರಾವಳಿಯಲ್ಲಿ ಮುಂದಿನ ಎರಡು ತಿಂಗಳು ಮೀನುಗಾರಿಕೆ ನಿಷೇಧ: ಏರಲಿದೆ ಮೀನಿನ ದರ?
ಉಡುಪಿ/ಮಂಗಳೂರು: ಮೀನು ಪ್ರಿಯರಿಗೆ ಅಪ್ರಿಯವಾದ ಸುದ್ದಿ ಇದು. ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕಾ ಋತು ಮುಕ್ತಾಯವಾಗಿದ್ದು, ಉಭಯ ಜಿಲ್ಲೆಗಳಲ್ಲಿಯೂ ಜೂ.1ರಿಂದ ಜು.31ರ ವರೆಗೆ ಆಳಸಮುದ್ರ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಮೀನಿನ ಪೂರೈಕೆಯಲ್ಲಿ ವ್ಯತ್ಯಾಸಗಳಾಗುವುದರಿಂದ ಮೀನಿನ ದರ ಗಗನಕ್ಕೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹೀಗಾದಲ್ಲಿ ಮೀನು ಖರೀದಿಸುವುದು ಕಷ್ಟವಾಗಿದ್ದು, ಮೀನು ಪ್ರಿಯರಿಗೆ ನಿರಾಶೆಯಾಗಲಿದೆ. ಮೀನುಗಾರಿಕಾ ಅವಧಿ ಮುಗಿದಿರುವುದರಿಂದ ಇನ್ನು ಆಗಸ್ಟ್ ತಿಂಗಳವರೆಗೂ ಕಾಯಬೇಕಾಗುತ್ತದೆ. ಆಳ ಸಮುದ್ರದ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳು ರಜಾ ಅವಧಿಯಾಗಿದ್ದು ಈ ಅವಧಿಯಲ್ಲಿ ಮೀನುಗಾರಿಕೆಯನ್ನು […]