ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ತಿರುಚಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ: ಬಿಜೆಪಿ

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ (ಕೆಪಿಎಸ್‌ಪಿಸಿಎ) ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ತಿರುಚಲು ಆಡಳಿತಾರೂಢ ಕಾಂಗ್ರೆಸ್ ಪ್ರಯತ್ನಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಭಾನುವಾರ ಎಚ್ಚರಿಕೆ ನೀಡಿದೆ. ಗೋಹತ್ಯೆ ನಿಷೇಧವನ್ನು ಎಮ್ಮೆಗಳಿಗೂ ವಿಸ್ತರಿಸದಿರುವುದನ್ನು ಪ್ರಶ್ನಿಸಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಗದ್ದಲ ಎಬ್ಬಿಸಿದ ಒಂದು ದಿನದ ಬಳಿಕ ಈ ಎಚ್ಚರಿಕೆ ಬಂದಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, 2021 ರಲ್ಲಿ ಕೆಪಿಎಸ್‌ಪಿಸಿಎ ಜಾರಿಗೆ ಬಂದಿತು ಮತ್ತು ಅದರ ನಿಬಂಧನೆಗಳನ್ನು ಚೆನ್ನಾಗಿ […]

ಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಅಮಿತ್ ಶಾ ಭೇಟಿ: ಕಾನೂನು ಎಲ್ಲರಿಗೂ ಒಂದೇ ಎಂದ ಗೃಹ ಸಚಿವ

ನವದೆಹಲಿ: ಬಿಜೆಪಿ ಸಂಸದ ಮತ್ತು ದೇಶದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ ಕ್ರೀಡಾಪಟು ಬಜರಂಗ್ ಪೂನಿಯಾ ಅವರು ಶನಿವಾರ ಸಂಜೆ ಗೃಹ ಸಚಿವರನ್ನು ಅವರ ದೆಹಲಿಯ ಮನೆಯಲ್ಲಿ ಭೇಟಿಯಾದರು ಎಂದು ಎನ್.ಡಿ.ಟಿ.ವಿ ವರದಿ ತಿಳಿಸಿದೆ. ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಸಭೆಯಲ್ಲಿ ಪುನಿಯಾ, […]

ಬಿಹಾರ: ನಿರ್ಮಾಣ ಹಂತದಲ್ಲಿದ್ದ 1,716 ಕೋಟಿ ರೂ ವೆಚ್ಚದ ಸೇತುವೆ ಎರಡನೇ ಬಾರಿ ಕುಸಿತ; ತನಿಖೆಗೆ ಆದೇಶ

ಪಟ್ನಾ: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಗಂಗಾ ನದಿಗೆ 1,716 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಭಾನುವಾರ ಕುಸಿದು ಬಿದ್ದಿದೆ. ಭಾಗಲ್ಪುರದ ಸುಲ್ತಂಗಂಜ್ ಮತ್ತು ಖಗಾರಿಯಾ ಜಿಲ್ಲೆಯ ಆಗುವನಿ ನಡುವೆ ನಿರ್ಮಿಸಲಾಗಿದ್ದ ಚತುಷ್ಪಥ ಸೇತುವೆ ಎರಡನೇ ಬಾರಿಗೆ ಕುಸಿದಿದೆ. ಘಟನೆ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಜೋರಾದ ಗಾಳಿ ಮಳೆಗೆ ಸೇತುವೆ ಕುಸಿದಿತ್ತು. 2014 ರಲ್ಲಿ ಪ್ರಾರಂಭವಾದ ಸೇತುವೆಯನ್ನು ಪೂರ್ಣಗೊಳಿಸಲು ಇದುವರೆಗೆ ಎಂಟು ಬಾರಿ ಗಡು ನೀಡಲಾಗಿದ್ದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೇತುವೆ […]

ಕೆಎಂಸಿ ಮಣಿಪಾಲದಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗ ಉದ್ಘಾಟನೆ: ಜೆನೆಟಿಕ್ ಸಂಶೋಧನೆ ಮತ್ತು ರೋಗಿಗಳ ಆರೈಕೆಯಲ್ಲಿ ಮೈಲಿಗಲ್ಲು ಸ್ಥಾಪನೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗವು(ಮೆಡಿಕಲ್ ಜೆನೆಟಿಕ್ಸ್) ತನ್ನ ಹೊಸ ಸೌಲಭ್ಯಗಳೊಂದಿಗೆ ಉದ್ಘಾಟನೆಗೊಂಡಿತು. ಇದು ಶಿಕ್ಷಣ, ಸಂಶೋಧನೆ ಮತ್ತು ರೋಗಿಗಳ ಆರೈಕೆಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 12,000-ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಸೌಲಭ್ಯವು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ವೈದ್ಯಕೀಯ ತಳಿಶಾಸ್ತ್ರದಲ್ಲಿನ ನಾವೀನ್ಯತೆಗಾಗಿ ವಿಭಾಗದ ಸಮರ್ಪಣೆಯನ್ನು ಉದಾಹರಿಸುತ್ತದೆ. ಈ ವಿಭಾಗವು ಡಿಎಂ (ಮೆಡಿಕಲ್ ಜೆನೆಟಿಕ್ಸ್), ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್), ಮತ್ತು ಡಾಕ್ಟರ್ ಆಫ್ ಫಿಲಾಸಫಿ ಪದವಿಗಳಂತಹ ವಿಶೇಷ ಕಾರ್ಯಕ್ರಮಗಳನ್ನು ನೀಡಲಿದೆ. ಎಂಎಸ್ಸಿ(ಜೆನೆಟಿಕ್ ಕೌನ್ಸೆಲಿಂಗ್) ಪಠ್ಯಕ್ರಮವು ಭಾರತದಲ್ಲಿ […]

ಆಗುಂಬೆ ಘಾಟ್‌ ಸ್ವಚ್ಛತಾ ಅಭಿಯಾನದಲ್ಲಿ ಕ್ರಿಯೇಟಿವ್‌ ಹಾಗೂ ಶಿರ್ಡಿ ಸಾಯಿಬಾಬಾ ಕಾಲೇಜು ವಿದ್ಯಾರ್ಥಿಗಳು ಭಾಗಿ

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಮಾತನಾಡಿ, ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ತಿಂದು ಬಿಸಾಡುವ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಅವುಗಳ ಜೀವನ ಅಪಾಯದಲ್ಲಿದೆ. ಆದ್ದರಿಂದ ನಾವು ಪ್ರಕೃತಿಯನ್ನು […]