ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆ ಖಾಲಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ , ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ರಸಾಯನಶಾಸ್ತ್ರ ವಿಷಯಕ್ಕೆ M.sc ಹಾಗೂ B.Ed ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಗಳನ್ನು ಸದ್ರಿ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಇಲಾಖೆ ಉಡುಪಿ, ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಯ ವಿವರವಾದ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ: ಮಾಹಿತಿ ಇಲ್ಲಿದೆ

ಬೆಂಗಳೂರು: ಪ್ರತಿ ತಿಂಗಳು 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಎಲ್ಲಾ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡುವ ಗೃಹ ಜ್ಯೋತಿ ಯೋಜನೆಯ ಮತ್ತು ಸರ್ಕಾರಿ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಸೋಮವಾರ ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗೃಹಜ್ಯೋತಿ 200 ಯೂನಿಟ್‌ಗಳ ಗರಿಷ್ಠ ಮಿತಿಯೊಂದಿಗೆ ಉಚಿತ ವಿದ್ಯುತ್ ಸರಬರಾಜು ಮನೆಯ ಮಾಸಿಕ ಸರಾಸರಿ ಬಳಕೆಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಕರ್ನಾಟಕ ಇಂಧನ ಇಲಾಖೆ ಹೊರಡಿಸಿದ […]
ಮುಂಗಾರು ಪೂರ್ವ ತಯಾರಿ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್ ಬಸ್‌ಗಳನ್ನು ಓಡಿಸಬೇಕು. ನಗರಸಭೆಯ 35 ವಾರ್ಡ್‌ಗಳಲ್ಲಿ ಬಸ್ ಗಳ ಅಗತ್ಯವಿರುವ ಮಾರ್ಗಗಳನ್ನು ಪಟ್ಟಿ ಮಾಡಿ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸುವಂತೆ ಶಾಸಕ ಯಶಪಾಲ್ ಎ. ಸುವರ್ಣ ಸೂಚಿಸಿದ್ದಾರೆ. ಅವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ […]
ರೈಲ್ವೆ ಇಲಾಖೆಯ ತಮ್ಮ ಕೆಲಸಗಳಿಗೆ ಮರಳಿದ ಕುಸ್ತಿ ಪಟುಗಳು: ನ್ಯಾಯಕ್ಕಾಗಿ ಹೋರಾಟ ಜಾರಿ

ನವದೆಹಲಿ: ದೇಶದ ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ದಿಗ್ಗಜ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುವ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು ದಿನಗಳ ನಂತರ ಮೇ 31 ರಂದು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ತಮ್ಮ ಕೆಲಸವನ್ನು ಪುನರಾರಂಭಿಸಿದರು. ಅಲ್ಲಿ ಅವರು ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಹಿಂದೆ […]
ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ಧಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ […]