ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರಿನ ತನಕ ವಿಸ್ತರಿಸುವಂತೆ ಕೇಂದ್ರ ಸಚಿವೆಗೆ ಮನವಿ ಸಲ್ಲಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಇಲ್ಲಿನ ಶಾಸಕ ಯಶ್ ಪಾಲ್ ಸುವರ್ಣ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದಲ್ಲಿ ಉಡುಪಿ ಹಾಗೂ ಮಂಗಳೂರು ಭಾಗದ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ. ಅಲ್ಲದೆ ಕಾರವಾರದಿಂದ […]

ಶ್ರೀಕೃಷ್ಣನ ಕರ್ಮಭೂಮಿ ದ್ವಾರಕೆಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಪೌರಾಭಿನಂದನೆ

ಉಡುಪಿ: ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಸುಪ್ರೀಂದ್ರತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿಯಾಗಿ ದ್ವಾರಕ ಕ್ಷೇತ್ರ ಯಾತ್ರೆ ನಡೆಸಿ ಗೋಮತಿ ನದಿ ಸಾಗರ ಸಂಗಮದಲ್ಲಿ ತೀರ್ಥಸ್ಥಾನ ನಡೆಸಿ ಭಕ್ತರೊಂದಿಗೆ ಶ್ರೀಕೃಷ್ಣ ದರ್ಶನ ಮಾಡಿದರು. ಪಲಿಮಾರು ಮಠದ ದ್ವಾರಕ ಶಾಖೆಯಲ್ಲಿ ಸಂಸ್ಥಾನ ಪೂಜೆ ನಡೆಸಿದರು. ಸಂಜೆ ನಡೆದ ಸಮಾರಂಭದಲ್ಲಿ ದ್ವಾರಕೆಯ ಪೌರಾಭಿನಂದನೆಯನ್ನು ಸ್ವೀಕರಿಸಿ ಉಡುಪಿಗೂ ಮಧ್ವಾಚಾರ್ಯರಿಗೂ ಇರುವ ಸಂಬಂಧವನ್ನು ವಿವರಿಸಿ ಪರ್ಯಾಯ ಮಹೋತ್ಸವ ಸಂದರ್ಭ ಉಡುಪಿಗೆ ಬರುವಂತೆ ಆಹ್ವಾನ ನೀಡಿದರು. ದ್ವಾರಕೆಯ ಮಾಜಿ ಮೇಯರ್, ದ್ವಾರಕ ಬ್ರಾಹ್ಮಣ […]

ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ನಿತ್ಯ ಹೋರಾಟಕ್ಕೂ ಸಿದ್ದ: ಕಾಪು ಬಿಜೆಪಿ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಸರಕಾರ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಮಾತ್ರ ಉಚಿತ ಎನ್ನುತ್ತಾ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟವಾಗಿದೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು […]

ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಅವರಿಗೆ ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್

ಮಂಗಳೂರು: ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಅವರು ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ 2023 ಗೆ ಭಾಜನರಾಗಿದ್ದಾರೆ. ಶ್ರೀಮಾ ರೈ ಇವರು ಪುತ್ತೂರಿನ ಬೆಳ್ಳಿಪ್ಪಾಡಿ ಕುಟುಂಬ ಟ್ರಸ್ಟ್ ನ ಅಧ್ಯಕ್ಷ ನೇಮಿರಾಜ್ ರೈ ಮತ್ತು ನಿಟ್ಟೆಗುತ್ತು ವಿಶಾಲಿ ಎನ್. ರೈ ಇವರ ಪುತ್ರಿಯಾಗಿದ್ದಾರೆ. ಶ್ರೀಮಾ ರೈ ರವರ ಸಹೋದರ ಶ್ರೀಮಂತ್ ರೈ ಅಮೇರಿಕಾದಲ್ಲಿ ನೆಲೆಸಿದ್ದಾರೆ. ಮಿಸೆಸ್ ಇಂಡಿಯಾ ಗ್ಲೋಬ್ 2009 ಕಿರೀಟವನ್ನು ಮುಡಿಗೇರಿಸಿರುವ ಶ್ರೀಮಾ ರೈ ಸದ್ಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಗಿ ಕಾರ್ಯ […]

ವಿಶ್ವ ಪರಿಸರ ದಿನಾಚರಣೆ: ಚಾಣಕ್ಯ ಟ್ಯುಟೋರಿಯಲ್ ವಿದ್ಯಾರ್ಥಿಗಳಿಂದ ಗಿಡನಾಟಿ

ಹೆಬ್ರಿ: ಜೂ.5ರಂದು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಗಿಡನಾಟಿ ಮಾಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಅಧ್ಯಕ್ಷ ಉದಯಕುಮಾರ್ , ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ,ಪೂಣಿ೯ಮಾ ಶೆಟ್ಟಿ, ಕೃಷ್ಣ ಶೆಟ್ಟಿ , ಪ್ರೇಮಾ ಕೆ.ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.