ಮಧ್ಯಪ್ರದೇಶದಲ್ಲಿ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 2.5 ವರ್ಷದ ಮಗು: ರಕ್ಷಣಾ ಕಾರ್ಯ ಜಾರಿ
ಭೋಪಾಲ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಹೊಲವೊಂದರಲ್ಲಿ ಆಟವಾಡುತ್ತಿದ್ದ 2.5 ವರ್ಷದ ಮಗು 300 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದು, ಮಂಗಳವಾರ ಮಧ್ಯಾಹ್ನದಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೋರ್‌ವೆಲ್‌ನಲ್ಲಿ ಗಂಟೆಗಟ್ಟಲೆ ಸಿಲುಕಿರುವ ಮಗುವನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮುಂಗೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಗು ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಕೊಳವೆ ಬಾವಿಯೊಳಗೆ ಬಿದ್ದಿದೆ. 50 ಅಡಿ ಕೆಳಗೆ ಬಿದ್ದಿರುವ ಮಗುವನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಸೆಹೋರ್ ಜಿಲ್ಲಾಧಿಕಾರಿ […]
11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ
ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚ ನೆಯ ಪ್ರಕಾರ, ಕಪಿಲ್ ಮೋಹನ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದ್ದು, ಉಮಾಶಂಕರ್ ಎಸ್ ಆರ್ ಅವರನ್ನು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಮಂಜುನಾಥ ಪ್ರಸಾದ್ ಎನ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಎಂಡಿ ವಿ ಅನ್ಬು […]
ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ವ್ಯಕ್ತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜೂನ್ 11ರಂದು ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ : ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ, ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಜೂನ್ 11ರಂದು ಬೆಳಿಗ್ಗೆ 10 ಗಂಟೆಯಿಂದ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗಮೇಳವನ್ನು ನಡೆಸಲಾಗುವುದು ಎಂದು ಮಿತೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9137386752 ಸಂಪರ್ಕಿಸಿ
ಭಾರತದಲ್ಲಿ ತೆರಿಗೆ ವಂಚನೆಯನ್ನು ಒಪ್ಪಿಕೊಂಡ ಬಿಬಿಸಿ: 40 ಕೋಟಿ ರೂ ಕಡಿಮೆ ಆದಾಯ ವರದಿ
ನವದೆಹಲಿ: ಮಾಧ್ಯಮ ದೈತ್ಯ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಭಾರತದಲ್ಲಿ ಕಡಿಮೆ ತೆರಿಗೆಯನ್ನು ಪಾವತಿಸಿರಬಹುದು ಎಂದು ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಿಬಿಸಿ ತನ್ನ ನೈಜ ಹೊಣೆಗಾರಿಕೆಗಿಂತ ಕಡಿಮೆ ತೆರಿಗೆಯನ್ನು ಪಾವತಿಸಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಇಬ್ಬರು ಅಧಿಕಾರಿಗಳ ವರದಿ ಹೇಳಿದೆ. ಸಂಸ್ಥೆಯು ತೆರಿಗೆ ಇಲಾಖೆಗೆ ಬರೆದ ಇಮೇಲ್‌ನಲ್ಲಿ, ಮಂಡಳಿಯು ಪತ್ತೆ ಮಾಡಿದ ಆದಾಯ ಕಡಿಮೆ ವರದಿ ಮಾಡಿರುವುದನ್ನು ಒಪ್ಪಿಕೊಂಡಿದೆ. ಇದು ‘ತೆರಿಗೆ ವಂಚನೆ’ಗೆ ಸಮನಾಗಿರುತ್ತದೆ, ಅದಕ್ಕಾಗಿ ಅದು ಚೇತರಿಕೆ […]