ಜೂನ್ 9 ರ ಬಳಿಕ ಐದು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ: ಉಡುಪಿ ನಗರಸಭೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ, ವಿದ್ಯಾರತ್ನ ನಗರ, ಶೀಂಬ್ರ ಭಾಗಕ್ಕೆ ಜೂನ್ 8 ರ ಬದಲು ಜೂನ್ 9 ರಂದು ನಗರಸಭೆಯ ಕೊಳವೆಯ ಮೂಲಕ ನೀರಿನ ಪೂರೈಕೆ ಮಾಡಲಾಗುವುದು. ನಂತರದಲ್ಲಿ 5 ದಿನಗಳಿಗೊಮ್ಮೆ ಅಂದರೆ, ಜೂನ್ 14 ರಂದು ಕಲ್ಮಾಡಿ, ಕೊಡವೂರು, […]
ಮಲ್ಪೆ ಮೀನುಗಾರರ ರೈತ ಉತ್ಪಾದಕ ಕಂಪನಿ ವತಿಯಿಂದ ಪಚ್ಚಲೆ ಕೃಷಿ ಕಾರ್ಯಾಗಾರ
ಉಡುಪಿ : ಇಲ್ಲಿನ ಮಲ್ಪೆ ಮೀನುಗಾರರ ರೈತ ಉತ್ಪಾದಕ ಕಂಪನಿಯಿಂದ ಪಚ್ಚಲೆ ಕೃಷಿಯಲ್ಲಿ ಉದ್ಯಮ ಶೀಲತೆ ಮತ್ತು ಬೆಳವಣಿಗೆಯ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರವು ಕಲ್ಯಾಣಪುರದ ಸುವರ್ಣ ನದಿತೀರದಲ್ಲಿ ಜರುಗಿತು. ಐಸಿಏಆರ್ ಮತ್ತು ಸಿಎಂಎಫ್‌ಆರ್‌ಐನ ಮಂಗಳೂರು ಪ್ರಾದೇಶಿಕ ಕೇಂದ್ರದ ಪ್ರಧಾನ ವಿಜ್ಞಾನಿ ಗೀತಾ ಸಸಿಕುಮಾರ್ ಅವರು ಪಚ್ಚಲೆ ಕೃಷಿಯಲ್ಲಿ ಅತ್ಯಂತ ಕಡಿಮೆ ಶ್ರಮ ಮತ್ತು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭಗಳಿಸುವ ಅವಕಾಶವಿದೆ ಎಂದು ತಿಳಿಸಿ ಪಚ್ಚಲೆ ಕೃಷಿಯನ್ನು ವ್ಯವಸ್ಥಿತವಾಗಿ ಮಾಡುವ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಸವಿವರವಾಗಿ ತಿಳಿಸಿಕೊಟ್ಟರು. […]
ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]
ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಜೀವನಮೌಲ್ಯ ಕಾರ್ಯಾಗಾರ
ಕಟಪಾಡಿ: ಜೂನ್ 5 ರಂದು ಇಲ್ಲಿನ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾಲೇಜಿನ ಸಿಬ್ಬಂದಿ ಶಶಿಕಿರಣ್ ಆಚಾರ್ಯ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವು ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕುರಿತಾದ ಬೀದಿ ನಾಟಕವನ್ನು ಪ್ರದರ್ಶಿಸಿ ಮಕ್ಕಳಿಗೆ ಪರಿಸರ ರಕ್ಷಣೆ ಮಹತ್ವ ತಿಳಿಸಿದರು. ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಹಾಗೂ ಪ್ರಾಧ್ಯಾಪಕರಿಗೆ ಗಿಡವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು, ಬೋಧಕ […]