ಉದ್ದಿಮೆ ರಫ್ತು ಉತ್ತೇಜನಕ್ಕಾಗಿ ಕೆಪಾಸಿಟಿ ಬಿಲ್ಡಿಂಗ್ ಪ್ರೋಗ್ರಾಮ್ ಕಾರ್ಯಾಗಾರ

ಉಡುಪಿ: ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕುರಿತು ಡಿ.ಜಿ.ಎಫ್.ಟಿ ಬೆಂಗಳೂರು, ವಿ.ಟಿ.ಪಿ.ಸಿ ಬೆಂಗಳೂರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಹಾಗೂ ಉಡುಪಿಯ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ರವರ ಸಹಯೋಗದೊಂದಿಗೆ ಕೆಪಾಸಿಟಿ ಬಿಲ್ಡಿಂಗ್ ಪ್ರೋಗ್ರಾಮ್ ಕಾರ್ಯಾಗಾರವನ್ನು ನಡೆಸಲು ಉದ್ದೇಶಿಸಲಾಗಿದ್ದು, ಸದ್ರಿ ಕಾರ್ಯಾಗಾರದಲ್ಲಿ ಜಿಲ್ಲೆಯಲ್ಲಿ ರಫ್ತು ಅವಕಾಶಗಳು, ಸವಾಲುಗಳು ಹಾಗೂ ರಫ್ತು ಚಟುವಟಿಕೆಯನ್ನು ಪ್ರಾರಂಭಿಸಲು ಇರುವ ನಿಯಮಾವಳಿಗಳು ಹಾಗೂ ಮುಂತಾದ ವಿಷಯಗಳ ಕುರಿತು ಉದ್ದಿಮೆದಾರರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುವುದು. ಆಸಕ್ತರು ಜೂನ್ […]

ಮೇ.1 ರಂದು ಅಮೆಜಾನ್ ಕಾಡಿನಲ್ಲಿ ವಿಮಾನ ಪತನ: 40 ದಿನಗಳ ಬಳಿಕ ವಿಮಾನದಲ್ಲಿದ್ದ ನಾಲ್ಕು ಮಕ್ಕಳ ಪತ್ತೆ

ಕೊಲಂಬಿಯಾ: ಇಲ್ಲಿನ ಅಮೆಜಾನ್ ಕಾಡಿನಲ್ಲಿ ವಿಮಾನ ಪತನಗೊಂಡ 40 ದಿನಗಳ ನಂತರ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಹೇಳಿದ್ದಾರೆ. ಮೇ 1 ರಂದು ವಿಮಾನ ಪತನಗೊಂಡಾಗ 13, 9, 4 ಮತ್ತು 1 ವರ್ಷ ವಯಸ್ಸಿನ ಒಡಹುಟ್ಟಿದ ನಾಲ್ಕು ಮಕ್ಕಳು ತಮ್ಮ ತಾಯಿ, ಪೈಲಟ್ ಮತ್ತು ಸಹ ಪೈಲಟ್‌ನೊಂದಿಗೆ ವಿಮಾನದಲ್ಲಿದ್ದರು. ಅವರ ತಾಯಿ ಮತ್ತು ವಿಮಾನದಲ್ಲಿದ್ದ ಪೈಲಟ್ ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವು ವಾರಗಳ ಹುಡುಕಾಟದ ನಂತರ ಮಕ್ಕಳನ್ನು ಕಂಡುಹಿಡಿದಿರುವುದು […]

ಜೂನ್ 12 ರಿಂದ 14 ರ ವರೆಗೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 12 ರಿಂದ 14 ರ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110 ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110 ಕೆ.ವಿ ನಿಟ್ಟೂರು, 110 ಕೆ.ವಿ ಬ್ರಹ್ಮಾವರ, 33 ಕೆ.ವಿ ಶಿರ್ವ, 33 ಕೆ.ವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆ.ವಿ […]

ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ: ಡಾ.ಪಿ.ವಿ.ಭಂಡಾರಿ

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು  ಹರೆಯವೂ ಅಲ್ಲದ ವಯಸ್ಕರೂ ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು. ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು  ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು. ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ […]

ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ […]