ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗಾಗಿ ಶಕ್ತಿ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ 20,000 […]
ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]
ಮುಂಬೈ ಮಂಗಳೂರು ಎರಡನೇ ದೈನಂದಿನ ವಿಮಾನ ಹಾರಾಟ ಆರಂಭಿಸಿದ ಏರ್ ಇಂಡಿಯಾ
ಮಂಗಳೂರು: ಏರ್ ಇಂಡಿಯಾದ ಎರಡನೇ ಮುಂಬೈ ಮಂಗಳೂರು ದೈನಂದಿನ ವಿಮಾನ ಹಾರಾಟ ಆರಂಭವಾಗಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಎರಡನೇ ದೈನಂದಿನ ವಿಮಾನ ಯಾನವನ್ನು ಆರಂಭಿಸಿದೆ. ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ ಜೂನ್ 10ರಿಂದ ಏರ್ ಇಂಡಿಯಾ ತನ್ನ ಎರಡನೇ ದೈನಂದಿನ ವಿಮಾನಯಾನ ಸೇವೆಯನ್ನು ಆರಂಭಿಸಿದೆ. ಮೇ 22 ರಂದು ಇಂಡಿಗೊ ಮುಂಬೈ-ಮಂಗಳೂರು ವಲಯದಲ್ಲಿ ಮೂರನೇ ದೈನಂದಿನ ವಿಮಾನವನ್ನು ಪ್ರಾರಂಭಿಸಿದ ನಂತರ ಈ ವಿಮಾನ ಸಂಚಾರ ಆರಂಭವಾಗಿದೆ. ಇದರೊಂದಿಗೆ, ಎರಡು […]
ಮುಂದಿನ 6 ಗಂಟೆ ಗುಡುಗು ಸಹಿತ ಮಳೆ ಸಾಧ್ಯತೆ :ಬಿಪೊರ್‌ಜಾಯ್ ಚಂಡಮಾರುತ ತೀವ್ರ, ಉತ್ತರ ದಿಕ್ಕಿನತ್ತ ಸಂಚಾರ
ನವದೆಹಲಿ: ತೀವ್ರಗೊಂಡಿರುವ ಬಿಪೊರ್‌ಜಾಯ್ ಚಂಡಮಾರುತ ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಭಾಗದಲ್ಲಿ ನೆಲೆಗೊಂಡು ಉತ್ತರದ ಕಡೆಗೆ ಚಲಿಸುತ್ತಿದೆ. ಗಂಟೆಗೆ 5 ಕಿ.ಮೀ ವೇಗದಲ್ಲಿ ಸಂಚರಿಸುತ್ತಿದೆ. ಮುಂದಿನ 6 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಸೃಷ್ಟಿಯಾಗಿರುವ ಅತ್ಯಂತ ತೀವ್ರವಾದ ಚಂಡಮಾರುತ ‘ಬಿಪೊರ್‌ಜಾಯ್’ ಗಂಟೆಗೆ 5 ಕಿ.ಮೀ ವೇಗದಲ್ಲಿ ದೇಶದ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿಳಿಸಿದೆ. ಮುಂದಿನ […]
ಜೂನ್ 23ಕ್ಕೆ ಉದ್ಘಾಟನೆ: ಯುವ ಪ್ರತಿಭೆಗಳಿಗಾಗಿ ಕ್ರೀಡಾಂಗಣ ನಿರ್ಮಿಸಿದ ಕ್ರಿಕೆಟಿಗ ಟಿ.ನಟರಾಜನ್
ಚೆನ್ನೈ (ತಮಿಳುನಾಡು): ಸದ್ಯ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಎಡಗೈ ವೇಗಿ ಟಿ. ನಟರಾಜನ್ ನಿರ್ಮಿಸಿರುವ ಕ್ರಿಕೆಟ್ ಮೈದಾನ ಇದೇ ತಿಂಗಳ 23 ರಂದು ಉದ್ಘಾಟನೆ ಕಾಣಲಿದೆ. ಇಲ್ಲಿ ಕ್ರಿಕೆಟರ್ಸ್ಗೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಯಾರ್ಕರ್ ಮೂಲಕ ಗಮನ ಸೆಳೆದ ಭಾರತೀಯ ಎಡಗೈ ವೇಗದ ಬೌಲರ್ ಟಿ. ನಟರಾಜನ್ ಅವರು ತಮ್ಮ ಸ್ವಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಿದ್ದು, ಜೂನ್ 23 ರಂದು ಉದ್ಘಾಟನೆಯಾಗಲಿದೆ. ಇದಕ್ಕೆ ‘ನಟರಾಜನ್ ಕ್ರಿಕೆಟ್ ಮೈದಾನ’ ಎಂದು ನಾಮಕರಣ ಮಾಡಲಾಗಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ […]