ಮೊದಲ ದಿನ ೫. ೭೧ ಲಕ್ಷ ಎರಡನೇ ದಿನ 41.34 ಲಕ್ಷ ಮಹಿಳಾ ಪ್ರಯಾಣಿಕರಿಂದ ಉಚಿತ ಪ್ರಯಾಣ
ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಮೊದಲನೇಯದಾಗಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾಂಗ್ರೆಸ್ ಘೋಷಿಸಿದ ಗೊಂದಲ ರಹಿತ ಮೊದಲ ಗ್ಯಾರಂಟಿ ಯೋಜನೆ ಎರಡನೇ ದಿನವೂ ಯಶಸ್ವಿ ಲಕ್ಷಣಗಳನ್ನು ತೋರಿದೆ. ಉಚಿತ ಪ್ರಯಾಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಬಸ್ನಲ್ಲಿ ಭರ್ಜರಿ ತಿರುಗಾಟ ನಡೆಸಿದ್ದಾರೆ. ಈ ಯೋಜನೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಎರಡನೇ ದಿನವಾದ ಸೋಮವಾರವೂ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು […]
ಒಡಿಶಾದ ಟಾಟಾ ಸ್ಟೀಲ್ ಪ್ಲಾಂಟ್ನಲ್ಲಿ ಸ್ಫೋಟದ ಪರಿಣಾಮ 19 ಕಾರ್ಮಿಕರಿಗೆ ಗಾಯ
ಧೆಂಕನಲ್ (ಒಡಿಶಾ): ಧೆಂಕನಲ್ ಜಿಲ್ಲೆಯ ಮೆರಮಂಡಲಿಯಲ್ಲಿರುವ ಟಾಟಾ ಸ್ಟೀಲ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿ, 19 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಟಾಟಾ ಸ್ಟೀಲ್ಸ್ ತಿಳಿಸಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಅಪಘಾತ ಸಂಭವಿಸಿತು. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಾವರದ ಆವರಣದಲ್ಲಿರುವ ಆರೋಗ್ಯ ಕೇಂದ್ರ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್ನ ಅಶ್ವಿನಿ ಆಸ್ಪತ್ರೆಗೆ ರವಾನಿಸಲಾಗಿದೆ. ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 […]
ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟ: ೨ ಟಾಪರ್ಸ್ಗಳಿಗೆ 99.99% ರಷ್ಟು ಅಂಕ
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ಯಜಿ 2023ರ ಫಲಿತಾಂಶ ಪ್ರಕಟಗೊಂಡಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ಇಂದು ರಾಷ್ಟ್ರೀಯ ವೈದ್ಯಕೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಯಜಿ 2023ರ ಫಲಿತಾಂಶ ಪ್ರಕಟಿಸಿದೆ. ಯುಪಿಯಿಂದ ಹೆಚ್ಚು ವಿದ್ಯಾರ್ಥಿಗಳು ಅರ್ಹ: ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತ್ಯಧಿಕ ಸಂಖ್ಯೆಯಲ್ಲಿ (1.39 ಲಕ್ಷ), ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ (1.31 ಲಕ್ಷ) ಮತ್ತು ರಾಜಸ್ಥಾನದ ವಿದ್ಯಾರ್ಥಿಗಳು (1 ಲಕ್ಷಕ್ಕೂ ಹೆಚ್ಚು) ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ್ದಾರೆ. ಒಟ್ಟು 11,45,976 ಅಭ್ಯರ್ಥಿಗಳು […]
ಸಿಂಗದೂರು ಲಾಂಚ್ ನಲ್ಲಿ ಜೂನ್.14ರಿಂದ ವಾಹನ ಸಾಗಣೆ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ದಿನೇ ದಿನೇ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಗಂದೂರು ಲಾಂಚ್ ನಲ್ಲಿ ಜೂನ್.14ರಿಂದ ಕಾರು, ಬಸ್ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಲ್ಲಿಸಲಾಗುತ್ತಿದೆ.. ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಜನರನ್ನು ಮಾತ್ರ ಲಾಂಚ್ ನಲ್ಲಿ ಶರಾವತಿ ಹಿನ್ನೀರಿನಲ್ಲಿ ಕರೆದೊಯ್ಯಲು ಅವಕಾಶ ನೀಡಲಾಗುತ್ತಿದೆ ಎಂದರು. . ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ […]
ವಿಧಾನಪರಿಷತ್ ಚುನಾವಣೆಗೆ ೧೩ರಿಂದ ನಾಮಪತ್ರ ಸಲ್ಲಿಕೆ ಆರಂಭ
ಬೆಂಗಳೂರು : ಕಳೆದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿತ್ತು. ಈ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಅಧಿಕಾರ ಕೊಟ್ಟಿದ್ದಾರೆ.ಸಚಿವ ಸಂಪುಟ ರಚನೆ ಕೂಡ ಆಗಿದೆ. ಆದರೇ, ಇದೀಗವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗುವ ಮೂರು ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜೂನ್ 20 ನಾಮಪತ್ರ […]