ಕುಂದಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರಗಳ ವತಿಯಿಂದ ತಂಬಾಕು ಮುಕ್ತ ಸಮಾಜ ಕುರಿತು ಜಾಗೃತಿ ಜಾಥಾ
ಕುಂದಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರ ಆವರ್ಸೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಿಲಿಯಾಣ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ವಂಡಾರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಿಲ್ಲಾಡಿ, ಸರ್ಕಾರಿ ಪ್ರೌಢಶಾಲೆ ಗೋಳಿಯಂಗಡಿ ಇವರುಗಳ ಜಂಟಿ ಸಹಯೋಗದೊಂದಿಗೆ ಜೂನ್ 07 ರಂದು ತಂಬಾಕು ಮುಕ್ತ ಸಮಾಜ ಕುರಿತು ಜಾಗೃತಿ ಜಾಥಾವನ್ನು ಗೋಳಿಯಂಗಡಿ ಪ್ರೌಢಶಾಲೆ ಆವರಣದಿಂದ ಗೋಳಿಯಂಗಡಿ ಪೇಟೆಯವರೆಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗೋಳಿಯಂಗಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಶ್ವ ಆರೋಗ್ಯ ಸಂಸ್ಥೆಯ “ತಂಬಾಕು ಬೇಡ ಆಹಾರ ಬೇಕು ತಂಬಾಕು […]
ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗಾಗಿ ಟೆಲಿ ಮನಸ್ ಉಚಿತ ಸಹಾಯವಾಣಿ
ಉಡುಪಿ: ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ವ್ಯಥೆಯಿಂದ ಬಳಲುತ್ತಿರುವವರು, ಪರೀಕ್ಷಾ ಒತ್ತಡಕ್ಕೆ ಒಳಪಟ್ಟವರು, ಕೌಟುಂಬಿಕ ಸಮಸ್ಯೆಗೆ ಒಳಗಾದವರು, ಆತ್ಮಹತ್ಯೆಯಂತಹ ಆಲೋಚನೆಯನ್ನು ಹೊಂದಿರುವವರು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡ ಅನಿಭವಿಸುತ್ತಿರುವವರು ಹಾಗೂ ಇತರೆ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಟೆಲಿ ಮನಸ್ ಯೋಜನೆಯ ಶುಲ್ಕ ರಹಿತ ದೂರವಾಣಿ ಸಂಖ್ಯೆ: 14416 ಅನ್ನು ಸಂಪರ್ಕಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ […]
ಬಸ್ ಗಳಲ್ಲಿನ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಲು ಆರ್.ಟಿ.ಓ ಸೂಚನೆ
ಉಡುಪಿ: ಜಿಲ್ಲೆಯಾದ್ಯಂತ ಖಾಸಗಿ ಬಸ್ಸುಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ಗಳಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆ, ಪ್ರಕಟಣೆಯ ಏಳು ದಿನಗಳ ಒಳಗೆ ಬಸ್ಸುಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಪರವಾನಿಗೆಯನ್ನು ಅಮಾನತುಗೊಳಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ
ಉಡುಪಿ : ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯು ಅನುಷ್ಠಾನಗೊಂಡಿದ್ದು, 193 ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ 25 ಪಂಚಾಯತ್ ವ್ಯಾಪ್ತಿಗಳಾದ ಹಾರಾಡಿ, ಚಾಂತಾರು, ವರಂಗ, ಬಡಾ, ಕಟಪಾಡಿ, ಪಡುಬಿದ್ರಿ, ಶಿರ್ವ, ಬೆಳ್ಮಣ್, ಬಸ್ರೂರು, ನಿಟ್ಟೆ, ಕುಕ್ಕುಂದೂರು, ಕಾಳಾವರ, ಅಮಾಸೆಬೈಲು, ಕೋಟೇಶ್ವರ, ಗಂಗೊಳ್ಳಿ, ತೆಂಕನಿಡಿಯೂರು, ಪೆರ್ಡೂರು, ಅಲೆವೂರು, ಉದ್ಯಾವರ, ಆರೂರು, ಕಾಂತಾವರ, ನಂದಳಿಕೆ, ಶಿರ್ಲಾಲು, ಯಡಮೊಗೆ ಹಾಗೂ ಬಳ್ಕೂರು ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು, ಸದರಿ ಬಾಕಿ ಕೇಂದ್ರಗಳ ಫ್ರಾಂಚೈಸಿ ಪಡೆಯಲು ಅರ್ಹ ಆಸಕ್ತ ಸಾರ್ವಜನಿಕರಿಂದ […]
ಉಸ್ತುವಾರಿ ಸಚಿವರಿಂದ ಬಾಲಕರ ಬಾಲ ಮಂದಿರ ಪರಿಶೀಲನೆ
ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಬಾಲಕರ ಬಾಲ ಮಂದಿರಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಮಂದಿರದಲ್ಲಿ ಮಕ್ಕಳ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಕ್ಕಳಿಗೆ ಯಾವುದೇ ರೀತಿಯ ಕುಂದುಕೊರತೆ ಹಾಗೂ ಸಮಸ್ಯೆಗಳಾಗಂತೆ ಎಚ್ಚರಿಕೆ ವಹಿಸುವಂತೆ ಮತ್ತು ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ […]