ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನಿಮಿತ್ತ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12 ರಂದು ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ […]

ಕಾಪು: ರಕ್ಷಿತ್ ಕೋಟ್ಯಾನ್ ಹಲ್ಲೆ ಪ್ರಕರಣ; ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕೃತ್ಯ ಎಸಗಿರುವುದು ಕಂಡು ಬಂದಿದೆ. ತಾವು […]

ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಒಂದೇ ದಿನ 522 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ   ಬೆಂಗಳೂರು: ಹೈಕೋರ್ಟ್ ನ್ಯಾಯಪೀಠಗಳು ದಿನಕ್ಕೆ 200 ಅಥವಾ ಗರಿಷ್ಠ ಎಂದರೆ 300 ಪ್ರಕರಣಗಳನ್ನು ವಿಷಯ ಪಟ್ಟಿಗೆ (ಕಾಸ್ ಲಿಸ್ಟ್)ಗೆ ಹಾಕಿಸಿ ಅವುಗಳ ವಿಚಾರಣೆ ನಡೆಸುವುದು ಸಾಮಾನ್ಯ. ಬಹುತೇಕ ಪ್ರಕರಣ ವಿಚಾರಣೆ ನಡೆಸಿ ಉಳಿದ ಪ್ರಕರಣಗಳಿಗೆ ಸಮಯದ ಅಭಾವ ಉಂಟಾದರೆ ಅವುಗಳನ್ನು ಮುಂದೂಡಲಾಗುತ್ತದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸೋಮವಾರ ಒಂದೇ ದಿನ 522 ಪ್ರಕರಣಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ […]