ಕಚ್‌ನಲ್ಲಿ ಚಂಡಮಾರುತ ಆತಂಕ :3.5 ತೀವ್ರತೆಯ ಭೂಕಂಪನ

ಕಚ್ (ಗುಜರಾತ್​): ರಕ್ಕಸ ಬಿಪರ್‌ಜೋಯ್ ಚಂಡಮಾರುತದ ಭೀತಿಯ ನಡುವೆಯೇ ಗುಜರಾತ್​ನ ಕಚ್‌ನಲ್ಲಿ ಬುಧವಾರ ಭೂಕಂಪನ ಸಂಭವಿಸಿದೆ. ಗುಜರಾತ್​ನ ಕಚ್‌ನಲ್ಲಿ ಚಂಡಮಾರುತದ ಆತಂಕದ ಮಧ್ಯೆ ಭೂಕಂಪದ ಭೀತಿ ಸೃಷ್ಟಿಯಾಗಿದೆ. ಇಂದು ಸಂಜೆ ಕಚ್‌ ಸಮೀಪ ಭಚೌ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ. ಇಲ್ಲಿನ ಭಚೌ ಪ್ರದೇಶದ ಪಶ್ಚಿಮ – ನೈಋತ್ಯದ 5 ಕಿಲೋಮೀಟರ್ ದೂರದಲ್ಲಿ ಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ 5.15ರ ಸುಮಾರಿಗೆ […]

‘ದಿ ಭವಾನಿ ಫೈಲ್ಸ್’ಗೆ ​ ಸಾಥ್​ ನೀಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್

ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಟ ಸಂತೋಷ್ ಆರ್ಯನ್. ಇದೀಗ ಹೊಸ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಆರ್ಯನ್​ ಸಜ್ಜಾಗಿದ್ದಾರೆ.ನಟ ಸಂತೋಷ್ ಆರ್ಯನ್ ಮುಂದಿನ ಸಿನಿಮಾದ ಟೈಟಲ್ ಅನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್ ಅನಾವರಣಗೊಳಿಸಿದ್ದಾರೆ. ‘ದಿ ಭವಾನಿ ಫೈಲ್ಸ್’ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಆರ್ಯನ್​ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಅವರ ಈ ಹೊಸ ಚಿತ್ರಕ್ಕೆ […]

ಉಡುಪಿ: ನಾಳೆ (ಜೂ.15) ಮಿಷನ್ ಆಸ್ಪತ್ರೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ

ಉಡುಪಿ: ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ ಇದರ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ ಕಾರ್ಯಕ್ರಮವು ಜೂನ್ 15ರಂದು ಆಸ್ಪತ್ರೆಯ ಆವರಣದಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರೋಪ ಕಾರ್ಯಕ್ರಮವು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಉಪಾಧ್ಯಕ್ಷ ವಿಕ್ಟರ್ ಅವರ ನೇತೃತ್ವದಲ್ಲಿ ಮಧ್ಯಾಹ್ನ 2.30 ಕ್ಕೆ ಮಿಷನ್ ಆಸ್ಪತ್ರೆ ಚಾಪೆಲ್‌ನಲ್ಲಿ ಕೃತಜ್ಞತಾ ಸೇವೆಯೊಂದಿಗೆ ಆರಂಭವಾಗಲಿದೆ. ಬಳಿಕ ಸಂಜೆ 4 […]

ಯುವಜನತೆ ತಾವು ಬೆಳೆಯುವ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು: ಶೋಭಾ ಕರಂದ್ಲಾಜೆ

ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು ಭೀಕ್ಷುಕರ ದೇಶ, ಬಡವರ ದೇಶ, ಹಾವಾಡಿಗಾರ ದೇಶವೆಂದು ವಿದೇಶಿಗರು ಕರೆಯುತ್ತಿದ್ದರು. ವಿದೇಶಗಳಲ್ಲಿ […]

ನೀಟ್‌ ಫಲಿತಾಂಶ: ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕಾರ್ಕಳ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್‌ ಇಂಡಿಯಾ ರ‍್ಯಾಂಕಿಂಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ‍್ಯಾಂಕ್‌, ಉದ್ಭವ್‌ ಎಂ ಆರ್‌ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ‍್ಯಾಂಕ್‌ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ ಎನ್‌ 625, ಶ್ರೇಯಸ್‌ ಎಸ್‌ ಚಿಕಾಲೇ 612, […]