ರಾಜ್ಯ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ಪಾಸ್ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in. ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ರೂ.30 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, […]

ಉಡುಪಿ: ಚಿನ್ನಾಭರಣ ಕಳ್ಳನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ ಪ್ರವೇಶಿಸಿ, ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ […]

ನಾಳೆ ಭುಜಂಗ ಪಾರ್ಕಿನಲ್ಲಿ ಉಚಿತ ಔಷಧೀಯ ಸಸ್ಯಗಳ ವಿತರಣೆ

ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಭುಜಂಗ ಪಾರ್ಕಿನಲ್ಲಿ 1000 ಕ್ಕೂ ಮಿಕ್ಕಿ ಔಷಧೀಯ ಸಸ್ಯಗಳ ಉಚಿತ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ಪಿ ನಾಯ್ಕ್ ವಹಿಸಿಕೊಳ್ಲಲಿದ್ದು, ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್.ಟಿ.ಓ ಸಾರಿಗೆ ಅಧಿಕಾರಿ ರವಿ ಶಂಕರ್ ಪಿ, ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರ್ಯ, […]

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ? ಆಸ್ಪತ್ರೆ ಮುಂದೆ ಹೈಡ್ರಾಮ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯ ನಂತರ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ ಎನ್ನಲಾಗಿದೆ. 2011 ರಿಂದ 2015 ರ ಎಐಎಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅವರು ಸಾರಿಗೆ ಸಚಿವರಾಗಿದ್ದಾಗ ಬಾಲಾಜಿಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಮಂಗಳವಾರ ಇಡಿ ದಾಳಿ ನಡೆಸಿ ಅವರನ್ನು ಪ್ರಶ್ನಿಸಿದೆ. ಉದ್ಯೋಗಕ್ಕಾಗಿ ನಗದು ಹಗರಣದ ಕುರಿತು ಪೊಲೀಸ್ ಮತ್ತು ಇಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ತಿಂಗಳುಗಳ ನಂತರ ಈ […]

ಚಂಡಮಾರುತ ಬಿಪರ್‌ಜೋಯ್ ಹಿನ್ನೆಲೆಯಲ್ಲಿ ಕಚ್ ಜಿಲ್ಲೆಯ 30000 ಕ್ಕೂ ಮಿಕ್ಕಿ ಸ್ಥಳೀಯರ ಸ್ಥಳಾಂತರ

ಅಹಮದಾಬಾದ್: ಬಿಪರ್‌ಜೋಯ್ ಚಂಡಮಾರುತವು ನಾಳೆ ಸಂಜೆ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಚಂಡಮಾರುತವು ಪ್ರಸ್ತುತ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದ್ದು ಪೋರಬಂದರ್‌ನಿಂದ ನೈಋತ್ಯಕ್ಕೆ 350 ಕಿಲೋಮೀಟರ್ ದೂರದಲ್ಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳವಾರ, ಗುಜರಾತ್‌ನ ಅಧಿಕಾರಿಗಳು ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕರಾವಳಿ ಪ್ರದೇಶಗಳಿಂದ 37,800 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಹಲವಾರು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡಗಳು ಕಾರ್ಯಾಚರಣೆಗೆ ಸನ್ನದ್ದವಾಗಿವೆ. ಪರಿಹಾರ […]