ರೆಡ್‌ಕ್ರಾಸ್ ಸಂಸ್ಥೆಯ ಸಮಾಜಮುಖಿ ಸೇವೆಗಳು ಶ್ಲಾಘನೀಯ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದ್ದು, ಯುದ್ಧ, ನೆರೆ ಮತ್ತು ಪ್ರಾಕೃತಿಕ ವಿಕೋಪಗಳಂತಹ ಸಂದರ್ಭದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಡಾ. […]
ರಕ್ತದಾನಿಗಳ ದಿನಾಚರಣೆಯಿಂದ ಹೊಸ ರಕ್ತದಾನಿಗಳಿಗೆ ಪ್ರೇರಣೆ: ಡಿ.ಹೆಚ್.ಓ ಡಾ. ನಾಗಭೂಷಣ ಉಡುಪ

ಉಡುಪಿ: ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು. ಅವರು ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಭಾವಪ್ರಕಾಶ ಆಡಿಟೋರಿಯಂನಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ […]
ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಯೋಜನೆಗಳ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಪುರ್ನವಸತಿ ಸೇರಿದಂತೆ ಅವರುಗಳು ಕಲ್ಯಾಣಾಭಿವೃದ್ದಿಗಾಗಿ ಸರಕಾರದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಇದರ ಲಾಭವನ್ನು ಅವರುಗಳು […]
ಇಂದು CET ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ..!!

ಬೆಂಗಳೂರು: 2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಇಂದು(ಜೂನ್ 15) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು ಬೆಳಗ್ಗೆ 9.30ಕ್ಕೆ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 20 ಹಾಗೂ 21ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಿತ್ತು. ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2.60 ಲಕ್ಷ ವಿದ್ಯಾರ್ಥಿಗಳು […]
ನೀಟ್ ಫಲಿತಾಂಶ: ಜ್ಞಾನಸುಧಾದ 93 ವಿದ್ಯಾರ್ಥಿಗಳಿಗೆ 500ಕ್ಕಿಂತ ಅಧಿಕ ಅಂಕ

ಉಡುಪಿ : ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ್ದ 2023ನೇ ಸಾಲಿನ ನೀಟ್ ಫಲಿತಾಂಶದಲ್ಲಿ ಜ್ಞಾನಸುಧಾದ 15 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕವನ್ನು, 93 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕವನ್ನು ಗಳಿಸಿದ್ದಾರೆ. ಅಥಿರಾ ಕೃಷ್ಣ ನಾಯಕ್ 99.5988 ಪರ್ಸಂಟೈಲ್‍ನೊಂದಿಗೆ 646 ಅಂಕ, ದ್ರುವ ಪಿ.ಬಿ. 99.4039 ಪರ್ಸಂಟೈಲ್‍ನೊಂದಿಗೆ 635 ಅಂಕ, ರೋಹಿತ್ ಹೆಗ್ಡೆ 99.2302 ಪರ್ಸಂಟೈಲ್‍ನೊಂದಿಗೆ 626 ಅಂಕ, ಚೇತನ್ ಸಿ ಪಾಟೀಲ್ 99.2302 ಪರ್ಸಂಟೈಲ್‍ನೊಂದಿಗೆ 626 ಅಂಕ, […]