ದೊಡ್ಡಣ್ಣಗುಡ್ಡೆ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಉಡುಪಿ: ದೊಡ್ಡಣ್ಣಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಆವರಣದಲ್ಲಿ ಪ್ರಾರಂಭಗೊಂಡಿರುವ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಂಸ್ಥಾಪಕರಾದ ಶ್ರೀ ಗುರೂಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಉಷಾ ರಮಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪ್ರತಿ ವರ್ಷ ವನಮಹೋತ್ಸವವನ್ನು ಆಚರಿಸಲಾಗುತ್ತಿದ್ದು ಈ ಬಾರಿ ವಿಶೇಷವಾಗಿ ವಾತಾವರಣವನ್ನು ಶುದ್ಧಗೊಳಿಸುವ ವಿಶೇಷ ಸಸಿಗಳನ್ನು ನೆಡಲಾಯಿತು. ಶಾಲಾ ವಿದ್ಯಾರ್ಥಿಗಳಲ್ಲಿ ಹಸಿರೇ ಉಸಿರು ಎಂಬ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ

ಮಣಿಪಾಲ: “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2023 ರ ಘೋಷ ವಾಕ್ಯ “ರಕ್ತ ನೀಡಿ, ಪ್ಲಾಸ್ಮಾ ನೀಡಿ, ಜೀವನವನ್ನು ಹಂಚಿಕೊಳ್ಳಿ, ಆಗಾಗ ಹಂಚಿಕೊಳ್ಳಿ”. ವಿಶ್ವ ಆರೋಗ್ಯ ಸಂಸ್ಥೆಯ […]

ನೀಟ್ ಫಲಿತಾಂಶ 2023: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ರಾಷ್ಟ್ರ ಮಟ್ಟದಲ್ಲಿ ನಡೆಯುವ ನೀಟ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಕುಂದಾಪುರ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಮರ್ ಪುರಾಣಿಕ್ 544/720, ಐಶ್ವರ್ಯ ಖಾರ್ವಿ 482/720, ತನಿಷಾ 459/720 ಅಂಕಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಮುರುಘಾ ಶ್ರೀಗಳ ವಿರುದ್ಧದ ಸಾಕ್ಷಿ ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಜು.1ರವರೆಗೆ ತಡೆಯಾಜ್ಞೆ ಈ […]

ನಕಲಿ ಖಾತೆಗಳ ಕುರಿತು ತನಿಖೆಗೆ ಸಹಕಾರ ನೀಡಬೇಕು ಇಲ್ಲವಾದಲ್ಲಿ ಫೇಸ್​​​ಬುಕ್​​​​​ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ (ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್ಬುಕ್ Facebook ಖಾತೆ ಪ್ರಾರಂಭಿಸಿ ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡಿದಿದ್ದಲ್ಲಿ ಭಾರತದಲ್ಲಿ ಫೇಸ್​​ಬುಕ್​ ಕಾರ್ಯಾಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸೌದಿ ಅರೇಬಿಯಾ ದೊರೆ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದ ಆರೋಪದ […]