60 ವರ್ಷಗಳ ಬಳಿಕವೂ ಗಟ್ಟಿಮುಟ್ಟಾಗಿರುವ ಅಣೆಕಟ್ಟೆ: ಶರಾವತಿ ಒಡಲಲ್ಲಿ ಮರೆಯಾಗಿದ್ದ ‘ಮಡೇನೂರು ಡ್ಯಾಂ’ ಮತ್ತೆ ಗೋಚರ
ಶಿವಮೊಗ್ಗ: ಶರಾವತಿ ನದಿಯ ಗರ್ಭದಲ್ಲಿ ಹುದುಗಿ 60 ವರ್ಷಗಳು ಕಳೆದರೂ ‘ಮಡೇನೂರು ಅಣೆಕಟ್ಟೆ’ ಇಂದಿಗೂ ತನ್ನ ಸೌಂದರ್ಯವನ್ನು ಹಾಗೆಯೇ ಉಳಿಸಿಕೊಂಡಿದೆ. ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರಿನಲ್ಲಿ ಈ ಅಣೆಕಟ್ಟೆ ಮುಳುಗಿ ಹೋಗಿದೆ. ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದಂತೆ ಮಡೇನೂರು ಅಣೆಕಟ್ಟೆ ಮತ್ತೆ ಹೊರ ಜಗತ್ತಿಗೆ ಕಾಣ ಸಿಗುತ್ತಿದೆ. ಮಡೇನೂರು ಡ್ಯಾಂ, ಹಿರೇಭಾಸ್ಕರ ಡ್ಯಾಂ ಎಂದು ಕರೆಯುತ್ತಾರೆ. ಮಲೆನಾಡಿನ ಕಾನನದ ಗರ್ಭದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಕನಸಿನ ಕೂಸಾಗಿ ನಿರ್ಮಾಣಗೊಂಡು, ಅಕಾಲಿಕವಾಗಿ ಅವಸಾನ ಹೊಂದಿದ್ದ ಮಡೇನೂರು ಅಥವಾ ಹಿರೇಭಾಸ್ಕರ ಡ್ಯಾಂ […]
ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ ಬದಲು ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. ಪ್ರಧಾನಮಂತ್ರಿಗಳ ಸಂಗ್ರಹಾಲಯ ಉದ್ಘಾಟನೆಗೊಂಡ ಸುಮಾರು ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿದೆ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ ಹೆಸರನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದ್ದು, ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಮರುನಾಮಕರಣ […]
ಮಂಗಳೂರಿನ ಗುರು-ಶಿಷ್ಯೆ ಯೋಗದಲ್ಲಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ ಸಾಧನೆ
ಯೋಗ ಸಾಧಕರು ಮಂಗಳೂರಿನ ಯೋಗ ಶಿಕ್ಷಕಿ ಕವಿತಾ ಅಶೋಕ್ ಮತ್ತು ಅವರ ಶಿಷ್ಯೆ 6ನೇ ತರಗತಿಯಲ್ಲಿ ಕಲಿಯುತ್ತಿರುವ ಮಧುಲಶ್ರೀ ಯೋಗದಲ್ಲಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಮಾಡಿದ್ದಾರೆ. ಮಂಗಳೂರು: ಭಾರತದೇಶವಷ್ಟೇ ಅಲ್ಲ, ಇಡೀ ವಿಶ್ವದಲ್ಲೇ ಯೋಗಕ್ಕೆ ವಿಶೇಷ ಗೌರವವಿದೆ. ಇದೀಗ ಯೋಗ ಕ್ಷೇತ್ರದಲ್ಲಿ ಮಂಗಳೂರಿನ ಗುರು- ಶಿಷ್ಯೆ ಇಬ್ಬರೂ ಇಂಡಿಯಾ ಬುಕ್ ಆಪ್ ರೆಕಾರ್ಡ್ ಮಾಡಿ ಹೊಸ ದಾಖಲೆ ಬರೆದಿದ್ದಾರೆ. ಯೋಗ ಶಿಕ್ಷಕಿ ಕವಿತಾ ಅಶೋಕ್ ಮತ್ತು ಅವರ ಶಿಷ್ಯೆ 6ನೇ ತರಗತಿ ಕಲಿಯುತ್ತಿರುವ ಮಧುಲಶ್ರೀ ಯೋಗ […]
ಸುಡಾನ್‌ನಲ್ಲಿ ಬಿಕ್ಕಟ್ಟು ಮತ್ತಷ್ಟು ಉಲ್ಬಣ
ವಿಶ್ವಸಂಸ್ಥೆ: ಸುಡಾನ್‌ನಲ್ಲಿ ಹಿಂಸಾತ್ಮಕ ಸಂಘರ್ಷ ಮೂರನೇ ತಿಂಗಳಿಗೆ ಕಾಲಿಟ್ಟಿದ್ದು ದೇಶಾದ್ಯಂತ ಮಾನವೀಯ ಪರಿಸ್ಥಿತಿ ಹದಗೆಡುತ್ತಲೇ ಇದೆ ಎಂದು ವಿಶ್ವಸಂಸ್ಥೆಯ ಪರಿಹಾರ ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ. ಸಂಘರ್ಷದಿಂದ ಜರ್ಜರಿತವಾಗಿರುವ ಸುಡಾನ್‌ನಲ್ಲಿ ಮಾನವೀಯ ಬಿಕ್ಕಟ್ಟು ತೀರಾ ಉಲ್ಬಣಗೊಂಡಿದೆ. ಅಗತ್ಯ ವಸ್ತುಗಳಿಗೆ ಜನ ಪರದಾಡುವಂತಾಗಿದೆ. ಮಾನವೀಯ ವ್ಯವಹಾರಗಳ ಯುಎನ್ ಅಂಡರ್‌ಸೆಕ್ರೆಟರಿ ಜನರಲ್ ಮತ್ತು ತುರ್ತು ಪರಿಹಾರ ಸಂಯೋಜಕರಾಗಿರುವ ಗ್ರಿಫಿತ್ಸ್, ಸುಡಾನ್‌ನ ಡಾರ್ಫರ್‌ನಲ್ಲಿ ಪರಿಸ್ಥಿತಿಯು ಮಾನವೀಯ ವಿಪತ್ತಿನತ್ತ ತಿರುಗುತ್ತಿದೆ ಎಂದು ಎಚ್ಚರಿಸಿದ್ದಾರೆ. ಸುಮಾರು 1.7 ಮಿಲಿಯನ್ ಜನರು ಈಗ ದೇಶದಲ್ಲಿ […]
ಜೂ.30ರವರೆಗೆ 2023-24ರ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ
ಬೆಂಗಳೂರು : 2023-24ರ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ತಿಂಗಳ ಜೂನ್ 30 ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಸಾರ್ವತ್ರಿಕ ವರ್ಗಾವಣೆಗಳನ್ನು ಜೂ. 15 ರವರೆಗೆ ಕೈಗೊಳ್ಳಲು ಸರ್ಕಾರ ಆದೇಶಿಸಿತ್ತು. ಈ ಮುಂಚೆ 2023- 24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂ. 15 ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರ ಈ […]