ಗಾಂಜಾ ಪೆಡ್ಲರ್‌ಗಳ ಬಂಧನ: 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶ
ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ […]
ಸಿಇಟಿ ಫಲಿತಾಂಶ: ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಎಸ್.ಎಚ್. ಪ್ರಥಮ ರ್ಯಾಂಕ್
ಮಂಗಳೂರು: ಮಂಗಳೂರಿನ ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜಿನ ಬೈರೇಶ್ ಎಸ್.ಎಚ್. ಅವರು ಸಿಇಟಿ ಬಿಎಸ್ಸಿ ಕೃಷಿಯಲ್ಲಿ ಪ್ರಥಮ, ಬಿಎನ್‍ವೈಎಸ್‍ನಲ್ಲಿ ದ್ವಿತೀಯ, ನರ್ಸಿಂಗ್, ಬಿ – ಫಾರ್ಮಾ, ಫಾರ್ಮಾ ಡಿ ಮತ್ತು ಪಶುವೈದ್ಯಕೀಯದಲ್ಲಿ 4ನೇ ಹಾಗೂ ಎಂಜಿನಿಯರಿಂಗ್‍ನಲ್ಲಿ 16ನೇ ರ್ಯಾಂಕ್ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಏಳು ವಿಭಾಗದ ಮೊದಲ ಹತ್ತು ರ್ಯಾಂಕ್‍ಗಳಲ್ಲಿ ಆರು ರ್ಯಾಂಕ್‍ಗಳನ್ನು ಬೈರೇಶ್ ಎಸ್.ಎಚ್. ಪಡೆದುಕೊಂಡು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆಯಲ್ಲಿ 720ರಲ್ಲಿ 710 ಅಂಕ ಪಡೆದ […]
ದೇಶದ ಉಜ್ವಲ ಭವಿಷ್ಯಕ್ಕಾಗಿ ಮಗದೊಮ್ಮೆ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಶ್ರಮ: ಶೋಭಾ ಕರಂದ್ಲಾಜೆ
ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ […]
ಕುಂದಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ನಿಮಿತ್ತ ರಕ್ತದಾನಿಗಳಿಗೆ ಸನ್ಮಾನ
ಕುಂದಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ವತಿಯಿಂದ ರಕ್ತದಾನ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಿತು. ವೇದಿಕೆಯಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇದರ ಸದಸ್ಯರು ಹಾಗೂ ರಕ್ತದಾನಿಗಳಾದ ಅರವಿಂದ ಉಪ್ಪಿನಕುದ್ರು, ಮಹೇಂದ್ರ ಉಪ್ಪಿನಕುದ್ರು, ದಿನೇಶ್ ಕಾಂಚನ್ ಬಾರಿಕೇರೆ,ರೇಷ್ಮಾ ಮಾರ್ಟಿಸ್ ಶಂಕರಪುರ, ಆದರ್ಶ್ ಉಪ್ಪಿನಕುದ್ರು, ಗೌರೀಶ್ ಹಳ್ಳಿಹೊಳೆ ಇವರನ್ನು ಸನ್ಮಾನಿಸಲಾಯಿತು. ಅಭಯಹಸ್ತ ಟ್ರಸ್ಟ್ ಕಳೆದ ಮೂರು ವರ್ಷಗಳಲ್ಲಿ ರಕ್ತದಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಸಂಘಟನೆಗಳ ಸಹಕಾರದಲ್ಲಿ ಉಡುಪಿ […]
ಕಾಪು: ಕಡಲ್ಕೊರೆತ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕಾಪು ತಾಲೂಕಿನ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಸಹಾಯಕ ಅಭಿಯಂತರ ಜಯರಾಜ್, […]