ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ

ಉಡುಪಿ: ಸತತ ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಪ್ರಸ್ತುತ ಜಗತ್ತಿನಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಅವಕಾಶಗಳು ಬಹಳಷ್ಟಿವೆ. ಅದನ್ನು ಸಾಧಿಸಲು ಛಲ ಹಾಗೂ ಪ್ರಯತ್ನ ಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಗಿಸುವಂತದ್ದು. ಜೊತೆಗೆ ಬದಲಾವಣೆಗಳಿಗೆ ಹೊಂದಿಕೊಂಡು ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತೇವೆ ಅನ್ನುವುದು ನಿರ್ಣಾಯಕ. ದೈಹಿಕ ಹಾಗೂ ಮಾನಾಸಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ವಿದ್ಯಾರ್ಥಿಯು ಪ್ರಬುದ್ಧನಾಗಲು ಸಾಧ್ಯ ಎಂದು ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪುನಶ್ಚೇತನ […]

ಪಂಚಾಯತ್ ಚುನಾವಣೆಗೂ ಮುನ್ನ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆ ನಿಯೋಜನೆ: ಕಲ್ಕತ್ತಾ ಹೈಕೋರ್ಟ್ ಆದೇಶ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳದ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. ಈ ಆದೇಶವನ್ನು 48 ಗಂಟೆಗಳ ಒಳಗೆ ಪಾಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಪ.ಬಂಗಾಳದ ಜಿಲ್ಲೆಗಳಾದ್ಯಂತ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದ ನ್ಯಾಯಾಲಯ, “ರಾಜ್ಯ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳ ರಾಜ್ಯವು ಕೇಂದ್ರ ಪಡೆಗಳ ನಿಯೋಜನೆಯಿಂದ ಏಕೆ ಹಿಂಜರಿಯುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಅಂತಹ ನಿಯೋಜನೆಯು ಈ ಹಿಂದೆ ಅಗತ್ಯ ಫಲಿತಾಂಶಗಳನ್ನು […]

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೂತನ ಅಧ್ಯಕ್ಷರಾಗಿ ಪ್ರೇಮ್ ಮಿನೇಜಸ್ ಆಯ್ಕೆ

ಉದ್ಯಾವರ: ಲಯನ್ಸ್ ಜಿಲ್ಲೆ 317C ಗೆ ಒಳಪಟ್ಟ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2023- 24ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಲಯನ್ ಪ್ರೇಮ್ ಮಿನೇಜಸ್ ಆಯ್ಕೆಯಾಗಿದ್ದಾರೆ. ಐದು ವರ್ಷಗಳ ಹಿಂದೆ ಆರಂಭಗೊಂಡಿರುವ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಮಾಸಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಮ್ಮಿ ಡಿಜಿಟಲ್ ಸ್ಟುಡಿಯೋ ಮಾಲಕರಾಗಿರುವ ಲಯನ್ ಪ್ರೇಮ್ ಮಿನೇಜಸ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಡಿಜಿಟಲ್ ಸೇವಾ ಕೇಂದ್ರದ ಲಯನ್ ಹರೀಶ್ಚಂದ್ರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಲಯನ್ ರೋಷನ್ […]

ಸುಜ್ಞಾನ ಎಜುಕೇಶನ್ ಅಕಾಡೆಮಿ: ದ್ವಿತೀಯ ಪಿಯುಸಿ ತರಗತಿಗೆ ನೇರ ಪ್ರವೇಶ ಪ್ರಾರಂಭ

ಉಡುಪಿ: ಇಲ್ಲಿನ ರಥಬೀದಿಯಲ್ಲಿರುವ ಸುಜ್ಞಾನ ಎಜುಕೇಶನ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ನೇರ ಪ್ರವೇಶಾತಿ ಪ್ರಾರಂಭವಾಗಿದೆ. ವಿಜ್ಞಾನ- PCMB/C ವಾಣಿಜ್ಯ- HEAB/C 1 ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2 ಪಿಯುಸಿ ಗೆ ಅರ್ಹರಾಗಿದ್ದಾರೆ ನಿಯಮಿತ ತರಗತಿಗಳು / ಕೈಗೆಟುಕುವ ಶುಲ್ಕಗಳು ನಿಯಮಿತ / ವೈಯಕ್ತಿಕ / ವಾರಾಂತ್ಯದ ತರಬೇತಿ 7ನೇ, 8ನೇ, 9ನೇ, 10ನೇ ತರಗತಿಗಳು (ICSE/CBSE) 1/2 PUC (ವಿಜ್ಞಾನ ಮತ್ತು ವಾಣಿಜ್ಯ ಶಾಖೆ) ಪದವಿ, ಪಿ.ಜಿ. ಕೋರ್ಸ್‌ಗಳು ಲಭ್ಯ ವಿಳಾಸ: ಸುಜ್ಞಾನ ಎಜುಕೇಶನ್ ಅಕಾಡೆಮಿ ಶ್ರೀ […]

ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ. ಈ […]