ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಜನತೆಗೆ ಮಂಕುಬೂದಿ ಎರಚಿದ ಕಾಂಗ್ರೆಸ್: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದ ಬಿಪಿಎಲ್ ಕುಟುಂಬಕ್ಕೆ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಮಾಸಿಕ 35 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ಉಚಿತವಾಗಿ ವಿತರಿಸುತ್ತಿದೆ. ಆದರೆ ಕಾಂಗ್ರೆಸ್ ಸಹಿತ ಸಿಎಂ ಸಿದ್ದರಾಮಯ್ಯ ಎಲ್ಲಿಯೂ ಈ ವಿಚಾರವನ್ನು ಪ್ರಚುರಪಡಿಸದೆ ಸತ್ಯವನ್ನು ಮರೆಮಾಚುವ ಕೀಳು ಮನಸ್ಥಿತಿಯ ಮೂಲಕ ಬಡವರ ಅನ್ನದ ವಿಚಾರದಲ್ಲೂ ಹೊಲಸು ರಾಜಕೀಯವನ್ನು ಪ್ರದರ್ಶಿಸಿದೆ. ಕೇವಲ ಅಧಿಕಾರಕ್ಕೇರುವ ಸ್ವಯಂ ಸ್ವಾರ್ಥ ಸಾಧನೆಗಾಗಿ […]
ಮತಾಂತರ ನಿಷೇಧ ತಿದ್ದುಪಡಿ ರದ್ದು; ಪಠ್ಯ ಬದಲಾವಣೆ: ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸುನಿಲ್ ಕುಮಾರ್
ಕಾರ್ಕಳ : ರಾಷ್ಟ್ರಭಕ್ತರಾದ ವೀರ್ ಸಾವರ್ಕರ್ ಮತ್ತು ಹೆಡ್ಗೆವಾರ್ ಅವರ ಕುರಿತಾದ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ? ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ? ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರಕಾರವನ್ನು ಪ್ರಶ್ನಿಸಿದ್ದಾರೆ. ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ […]
ಮತಾಂತರ ವಿರೋಧಿ ಕಾನೂನು ತಿದ್ದುಪಡಿಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರವು ಮತಾಂತರ ವಿರೋಧಿ ಕಾನೂನಿಗೆ ಜಾರಿಗೆ ತಂದ ತಿದ್ದುಪಡಿಗಳನ್ನು ರದ್ದುಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ. ಪಾಟೀಲ್ ಪ್ರಕಾರ, ಜುಲೈ 5 ರಿಂದ ಪ್ರಾರಂಭವಾಗುವ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ “ಮತಾಂತರ ವಿರೋಧಿ ಮಸೂದೆಗೆ ಮಾಡಲಾದ ಬದಲಾವಣೆಗಳನ್ನು ರದ್ದುಗೊಳಿಸಲಾಗುವುದು”. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮಸೂದೆ, 2021, ಪ್ರಕಾರ ತಪ್ಪು ನಿರೂಪಣೆ, ಬಲವಂತ, ವಂಚನೆ, ಆಮಿಷ ಅಥವಾ ಮದುವೆಯ […]
ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆ ಮಿಷನ್ ಆಸ್ಪತ್ರೆ: ಶತಮಾನೋತ್ಸವ ಸಂಭ್ರಮದಲ್ಲಿ ಫಾ.ಹೇಮಚಂದ್ರ ಕುಮಾರ್ ಅಭಿಮತ
ಉಡುಪಿ: ಸುಮಾರು ನೂರು ವರ್ಷಗಳ ಹಿಂದೆ ಅತ್ಯಂತ ಕಠಿಣ ಸಂದರ್ಭದಲ್ಲಿ ಪ್ರಾರಂಭವಾದ ಲೊಂಬಾರ್ಡ್(ಮಿಷನ್) ಆಸ್ಪತ್ರೆ ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆಯಾಗಿದೆ. ಡಾ ಈವಾ ಲೊಂಬಾರ್ಡ್ ಎಂಬ ಸ್ವಿಸ್ ಮಿಷನರಿ ವೈದ್ಯರು ಇಲ್ಲಿನ ಬಡ ಜನರಿಗಾಗಿ ಸ್ಥಾಪಿಸಿದ ಆಸ್ಪತ್ರೆಯು ಇಂದು ಶತಮಾನೋತ್ಸವವನ್ನು ಆಚರಿಸುತ್ತಿರುವುದು ಸಂತಸದ ವಿಚಾರ ಎಂದು ಕೆ.ಎಸ್.ಡಿ ಬಿಷಪ್ ರ.ಫಾ ಹೇಮಚಂದ್ರ ಕುಮಾರ್ ಅಭಿಪ್ರಾಯ ಪಟ್ಟರು. ಅವರು ಗುರುವಾರದಂದು ಮಿಷನ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಿಷನ್ ಆಸ್ಪತ್ರೆಯು ಜನರ ನಾಡಿ ಮಿಡಿತ […]