ಹೆದ್ದಾರಿಯಲ್ಲಿ ಆಗುವ ದುರ್ಘಟನೆಗಳಿಗೆ ಸಂಸದರೇ ಕಾರಣ: ರಮೇಶ್ ಕಾಂಚನ್
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಪುರದ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿದು ಏನಾದರೂ ಅಪಾಯ ಸಂಭವಿಸಿದ್ದಲ್ಲಿ ಅದರ ನೈತಿಕ ಹೊಣೆಯನ್ನು ಹೊರಲು ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆಯವರು ಸಿದ್ದರಿದ್ದಾರೆಯೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ. ಅವೈಜ್ಞಾನಿಕವಾಗಿ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಆಳವಾದ ಗುಂಡಿಯನ್ನು ತೋಡಿದ್ದು ಸೂಕ್ತವಾದ ಮುನ್ನೆಚ್ಚರಿಕಾ ಕ್ರಮವನ್ನು ಕೂಡ ಕೈಗೊಂಡಿಲ್ಲ. ಒಂದು […]
ಉಡುಪಿ: ಬಡಗಬೆಟ್ಟು ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಮೌಲ್ಯದ ಪುಸ್ತಕ, ಸಮವಸ್ತ್ರ ವಿತರಣೆ
ಉಡುಪಿ: ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ವತಿಯಿಂದ ಜಿಲ್ಲೆಯ 25 ಕನ್ನಡ ಮಾಧ್ಯಮ ಶಾಲೆಗಳಿಗೆ 10 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಸಮವಸ್ತ್ರ ಹಾಗೂ ಆರ್ಥಿಕ ನೆರವು ವಿತರಣೆ ಮಾಡಲಾಯಿತು. ಅಜ್ಜರಕಾಡು ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಲಾಮಕ್ಕಳಿಗೆ ನೋಟ್ ಪುಸ್ತಕ, ಸಮವಸ್ತ್ರ ನೀಡಲಾಯಿತು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡುದರು. ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ […]
ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ
ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ […]
ಮೃತ ಮೀನುಗಾರರಿಗೆ ಪರಿಹಾರ ನೀಡದ ಬಿಜೆಪಿಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ: ಮಂಕಾಳ ವೈದ್ಯ
ಉಡುಪಿ: ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕೆಂಬ ಉದ್ದೇಶದಿಂದ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ವಿರೋಧ ಮಾಡುವುದು ಮಾಮೂಲಿ. ಮೃತಪಟ್ಟ ಮೀನುಗಾರರಿಗೆ ಅವರಿಂದ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇನ್ನೂ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಕಿಡಿಕಾರಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರು ಬಾಯಿಗೆ ಬಂದ ಹಾಗೆ ಮಾತನಾಡ್ತಾರೆ ಅಂತಾ ನಾವು ಮಾತನಾಡಲ್ಲ. ನಾವು ಬಡವರ ಪರವಾಗಿ ಇದ್ದೇವೆ. ಸಾಮಾನ್ಯಜನರ ಮಾಡುತ್ತಿದ್ದೇವೆ. ಇಷ್ಟೇ […]
ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ
ಶಿರ್ವ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಶನಿವಾರ ಭೇಟಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಇತರೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ವಹಿಸಿ ಮತ್ತು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಲಿರುವುದರಿಂದ ಈ ಬಗ್ಗೆ ಸೂಕ್ತ ಮುಂಜಾಗ್ರತ ಕ್ರಮ ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಆಚಾರ್ಯ, ಶಿರ್ವ ಗ್ರಾಮ […]