ಉಡುಪಿ: ಸುನೀಲ್ ಸಾಲಿಯಾನ್ ಕಡೆಕಾರ್ ಗೆ ಸೇವಾ ರತ್ನ ಜಾನಪದ ಪ್ರಶಸ್ತಿ

ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಮತ್ತು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ವತಿಯಿಂದ ಉಡುಪಿ ಅಮೃತ್ ಗಾರ್ಡನ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಸಾಲಿಯಾನ್ ಕಡೆಕಾರ್ ಅವರಿಗೆ ಸೇವಾ ರತ್ನ ಜಾನಪದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, […]

ರಶ್ಮಿಕಾ ಮಂದಣ್ಣಗೆ 80 ಲಕ್ಷ ರೂಪಾಯಿ ಮೋಸ ಮಾಡಿದ ಮ್ಯಾನೇಜರ್‌ ಗೆ ಗೇಟ್ ಪಾಸ್

ಹೈದರಾಬಾದ್: ಆರೋಪಿ ಮ್ಯಾನೇಜರ್‌ ನಟಿಗೆ 80 ಲಕ್ಷ ರೂ. ಮೋಸ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಆರೋಪಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.\ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮನ್ನು ವಂಚಿಸಿದ ಮ್ಯಾನೇಜರ್​ ಓರ್ವನನ್ನು ಕೆಲಸದಿಂದ ವಜಾ ಮಾಡಿದ್ದಾರೆ.ನಟಿ ರಶ್ಮಿಕಾ ಮಂದಣ್ಣ ಅವರು ತಮಗೆ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕೆಲಸದಿಂದ ತೆಗೆದುಹಾಕಿ ಮನೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಟಿಯ ಪ್ರತಿದಿನದ […]

ಹಿಮ ರಾಷ್ಟ್ರದಲ್ಲಿ ಆದಿಪುರುಷ್​ ಸಿನಿಮಾ ಪ್ರದರ್ಶನ ಬಂದ್​ ಕಾರಣ ಸೀತೆ ಭಾರತವಲ್ಲ, ನೇಪಾಳದ ಮಗಳು

ಕಠ್ಮಂಡು(ನೇಪಾಳ):ಸೀತೆಯನ್ನು ಭಾರತದ ಮಗಳೆಂದು ಬಿಂಬಿಸಲಾಗಿದೆ. ಜಾನಕಿ ಜನಿಸಿದ್ದು ನೇಪಾಳದ ಜನಕಪುರದಲ್ಲಿ. ಈ ಬಗ್ಗೆ ಸುಳ್ಳು ಹೇಳಿದ್ದಕ್ಕೆ ದೇಶದಲ್ಲಿ ಸಿನಿಮಾ ಪ್ರದರ್ಶನವನ್ನು ನಿರ್ಬಂಧಿಸಲಾಗಿದೆ. ಸಂಭಾಷಣೆ ಮತ್ತು ಚಿತ್ರಕಥೆ ಕಾರಣಕ್ಕಾಗಿ ತೀವ್ರ ವಿವಾದಕ್ಕೀಡಾಗಿರುವ ತೆಲುಗು ನಟ ಪ್ರಭಾಸ್​ ಅಭಿನಯದ ಆದಿಪುರುಷ್ ಸಿನಿಮಾ ಪ್ರದರ್ಶನಕ್ಕೆ ನೇಪಾಳದಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ.ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಾಗಿರುವ ಆದಿಪುರುಷ್​ ಸಿನಿಮಾ ಒಂದಲ್ಲೊಂದು ಕಾರಣಕ್ಕೆ ವಿವಾದಕ್ಕೆ ಸಿಲುಕುತ್ತಿದೆ. ಪ್ರಸಿದ್ಧ ಹಿಂದೂ ಮಹಾಕಾವ್ಯ ರಾಮಾಯಣ ಆಧರಿಸಿ ಆದಿಪುರುಷ ಸಿನಿಮಾದಲ್ಲಿ ಸೀತೆಯ ಮೂಲದ ಬಗ್ಗೆ ಸುಳ್ಳು ಹೇಳಲಾಗಿದೆ. […]

ಚೆನ್ನೈ, ಬೆಂಗಳೂರಿನಲ್ಲಿ ಪಂದ್ಯ ಆಡುವುದಿಲ್ಲ ಎಂದ ಪಾಕಿಸ್ತಾನ- ಏಕದಿನ ವಿಶ್ವಕಪ್‌ ಕ್ರಿಕೆಟ್‌

ಅಫ್ಘಾನಿಸ್ತಾನ ತಂಡದ ವಿರುದ್ಧ ಚೆನ್ನೈನಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನಲ್ಲಿ ಆಡಲು ಪಾಕಿಸ್ತಾನ ಆಕ್ಷೇಪಿಸಿದೆಏಕದಿನ ಕ್ರಿಕೆಟ್ ವಿಶ್ವಕಪ್​ನ ಕರಡು ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ಐಸಿಸಿ) ಆಡುವ ಎಲ್ಲ ದೇಶಗಳಿಗೂ ಕಳುಹಿಸಿ ಕೊಟ್ಟಿದ್ದು, ಆಕ್ಷೇಪಗಳಿದ್ದಲ್ಲಿ ತಿಳಿಸುವಂತೆ ತಿಳಿಸಿದೆ. ಏಕದಿನ ವಿಶ್ವಕಪ್​ಗೆ ಇನ್ನು ನಾಲ್ಕು ತಿಂಗಳುಗಳಿವೆ. ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ಐಸಿಸಿ ಇದೆ. ಆಡುವ ದೇಶಗಳ ಅಭಿಪ್ರಾಯಕ್ಕಾಗಿ ಐಸಿಸಿ ಕರಡು ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ಇದಕ್ಕೆ ಪಾಕಿಸ್ತಾನ ಕೊಟ್ಟ ಕಾರಣ “ಕುಣಿಯಲಾರದವರಿಗೆ ನೆಲ ಡೋಂಕು” ಎಂಬ ಗಾದೆಯಂತಿದೆ. 2023ರ ಏಕದಿನ […]

ಟ್ರಾಫಿಕ್ ಕಂಟ್ರೋಲ್‌ಗೆ ಬೆಂಗಳೂರಿನಲ್ಲಿ ಇಂದಿನಿಂದ ಡ್ರೋನ್ ಕ್ಯಾಮರಾಗಳ ಪ್ರಾಯೋಗಿಕ ಹಾರಾಟ

ಬೆಂಗಳೂರು : ಬೆಂಗಳೂರು ನಗರದ ವಿಪರೀತ ಸಂಚಾರ ದಟ್ಟಣೆಯನ್ನು ಶತಾಯಗತಾಯ ಕಡಿಮೆ‌ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಣ ತೊಟ್ಟಿರುವ ಸಂಚಾರಿ ಪೊಲೀಸರು ಡ್ರೋನ್ ಕ್ಯಾಮರಾಗಳ ಮೊರೆ ಹೋಗಿದ್ದಾರೆ.ಸಂಚಾರ ದಟ್ಟಣೆ ಕಡಿಮೆ ಮಾಡಲು ಇದೇ ಮೊದಲ ಬಾರಿಗೆ ಟ್ರಾಫಿಕ್​ ಪೊಲೀಸರು ಡ್ರೋನ್​ ಬಳಕೆ ಮಾಡಲು ಮುಂದಾಗಿದ್ದಾರೆ. ನಗರ ಸಂಚಾರ ವಿಭಾಗ ಡಿಐಜಿ ಎಂ.ಎನ್.ಅನುಚೇತ್ ವಿವರಣೆ ಜನಸಂದಣಿ‌ ಹಾಗೂ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಪ್ರಮುಖವಾಗಿ ಪೀಕ್​ ಅವರ್‌ನಲ್ಲಿ ಸಂಚಾರ ದಟ್ಟಣೆ ಸುಧಾರಿಸಲು ಡ್ರೋನ್ ಕ್ಯಾಮರ ಬಳಸಲು […]