ವಿಶ್ವದಲ್ಲಿ ಉನ್ನತ ಸ್ಥಾನಮಾನ ಪಡೆದುಕೊಳ್ಳುತ್ತಿದೆ ಭಾರತ: ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಹೈದರಾಬಾದ್ : ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿಕೆ ಯಾವುದೇ ದೇಶದ ವಿರುದ್ಧ ಅನ್ಯಾಯ ಮಾಡದೇ, ಭಾರತವು ವಿಶ್ವದಲ್ಲಿ ತನಗೆ ಸಿಗಬೇಕಾದ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಭಾರತವು ಯಾವುದೇ ದೇಶದ ಮೇಲೆ ದಬ್ಬಾಳಿಕೆ ಎಸಗುತ್ತಿಲ್ಲ. ಆದರೆ ವಿಶ್ವದಲ್ಲಿ ತನಗೆ ಸಿಗಬೇಕಾದ ಸರಿಯಾದ ಸ್ಥಾನಮಾನವನ್ನು ಪಡೆದುಕೊಳ್ಳುತ್ತಾ ಸಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತವು ಯಾವುದೇ ದೇಶದ ಮೇಲೆ ದಬ್ಬಾಳಿಕೆ ಎಸಗುವ ಮನಸ್ಥಿತಿ ಹೊಂದಿಲ್ಲ. ಭಾರತವು ವಿಶ್ವದಲ್ಲಿ ತನಗೆ ಸಿಗಬೇಕಾದ ಸೂಕ್ತ ಸ್ಥಾನಮಾನವನ್ನು […]

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ‌ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು‌. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]

ಜೆ ಇ.ಇ ಅಡ್ವಾನ್ಸ್ ಫಲಿತಾಂಶ: ಜ್ಞಾನಸುಧಾ ಕಾಲೇಜಿಗೆ ಹತ್ತು ಸಾವಿರದೊಳಗೆ 10 ರ‍್ಯಾಂಕ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐ.ಐ.ಟಿ) ಪ್ರವೇಶಕ್ಕೆ ನಡೆದಿದ್ದ ಜೆ.ಇ.ಇ ಅಡ್ವಾನ್ಸ್ನ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು ಜ್ಞಾನಸುಧಾಕ್ಕೆ 10 ಸಾವಿರದೊಳಗಿನ 10 ರ‍್ಯಾಂಕುಗಳು ಬಂದಿರುತ್ತದೆ. ಜನರಲ್ ಕೆಟಗರಿಯಲ್ಲಿ ವಿದ್ಯಾರ್ಥಿಗಳಾದ ಧನ್ವಿತ್ ನಾಯಕ್ 3918ನೇ ರ‍್ಯಾಂಕ್, ಪ್ರಣವ್ ಗುಜ್ಜರ್ 5601ನೇ ರ‍್ಯಾಂಕ್, ಸಮೃದ್ಧ್ನೆಲ್ಲಿ 5769ನೇ ರ‍್ಯಾಂಕ್ ಹಾಗೂ ಜನರಲ್ ಇ.ಡಬ್ಲು.ಎಸ್ ಕೆಟಗರಿಯಲ್ಲಿ 715ನೇ ರ‍್ಯಾಂಕ್, ಒ.ಬಿ.ಸಿ-ಎನ್.ಸಿ.ಎಲ್ ಕೆಟಗರಿಯಲ್ಲಿ ಸಾಯಿ ಲಿಖಿತ್ ರೆಡ್ಡಿ 3947 ನೇ ರ‍್ಯಾಂಕ್, ಅಮೃತ್ ಗೌಡ ಎಂ. ಪಾಟೀಲ್ 4117 ನೇ ರ‍್ಯಾಂಕ್, […]

ಚೊಚ್ಚಲ ಹೆಣ್ಣು ಮಗುವನ್ನು ಬರಮಾಡಿಕೊಂಡ ರಾಮ್ ಚರಣ್ ದಂಪತಿಗಳು

ನಟ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಕೊನಿಡೇಲಾ ತಮ್ಮ ಚೊಚ್ಚಲ ಹೆಣ್ಣು ಮಗುವನ್ನು ಬರ ಮಾಡಿಕೊಂಡಿದ್ದಾರೆ. ಈ ಸುದ್ದಿಯನ್ನು ಆಸ್ಪತ್ರೆಯ ಬುಲೆಟಿನ್ ಮೂಲಕ ಪ್ರಕಟಿಸಲಾಗಿದೆ. ಉಪಾಸನಾ ಕೊನಿಡೇಲಾ ಜುಬಿಲಿ ಹಿಲ್ಸ್ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಚೆನ್ನಾಗಿದ್ದಾರೆ ಎಂದು ಆಸ್ಪತ್ರೆಯು ತಿಳಿಸಿದೆ. ಡಿಸೆಂಬರ್‌ನಲ್ಲಿ ತಾವು ತಂದೆ ತಾಯಿಯರಾಗುವ ಬಗ್ಗೆ ದಂಪತಿಗಳು ಘೋಷಿಸಿಕೊಂಡಿದ್ದರು. ರಾಮ್ ಚರಣ್ ಅವರ ತಂದೆ, ನಟ ಚಿರಂಜೀವಿ, ಮಂಗಳವಾರ ಮುಂಜಾನೆ ದಂಪತಿಗಳನ್ನು ಭೇಟಿ ಮಾಡಿ […]

ಮಂಗಳೂರು: ಲುಲು ಗ್ರೂಪ್ ನಲ್ಲಿ ಉದ್ಯೋಗ ನೇಮಕಾತಿಗಾಗಿ ಫರ್ನಾಂಡಿಸ್ ಗ್ರೂಪ್ ವತಿಯಿಂದ ನೇರ ಸಂದರ್ಶನ

ಮಂಗಳೂರು: ಏಷ್ಯಾದ ಅತಿ ದೊಡ್ಡ ಹೈಪರ್‌ ಮಾರ್ಕೆಟ್ ಗ್ರೂಪ್ ಆದಂತಹ ಲುಲು ಗ್ರೂಪ್ ನಲ್ಲಿ ಯುವಕರಿಗಾಗಿ ಉದ್ಯೋಗಾವಕಾಶಗಳಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳೂರಿನ ಫರ್ನಾಂಡಿಸ್ ಅಸೋಸಿಯೇಟ್ಸ್ ಕಚೇರಿಯಲ್ಲಿ ಜೂನ್ 22 ಮತ್ತು 23 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರ ನಡುವೆ ನೇರ ಸಂದರ್ಶನಗಳನ್ನು ಏರ್ಪಡಿಸಲಾಗಿದೆ ಎಂದು ಫರ್ನಾಂಡಿಸ್ ಗ್ರೂಪ್ ನ ಅಧ್ಯಕ್ಷ ವಿಲ್ಸನ್ ಫೆರ್ನಾಂಡಿಸ್ ಹೇಳಿದರು. ಅವರು ಮಂಗಳವಾರದಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಯುಎಇ, ಕತಾರ್, ಬಹ್ರೇನ್‌, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ […]