ಕಾಶೀಮಠ ಸಂಸ್ಥಾನ ವೆಲ್ಫೇರ್ ಫಂಡ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಉಡುಪಿ: ಕಾಶೀಮಠ ಸಂಸ್ಥಾನ ವೆಲ್ಫೇರ್ ಫಂಡ್ (ರಿ)ವಿಟಿ ರೋಡ್ ಉಡುಪಿ, ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಜಿ.ಎಸ್.ಬಿ ಸಮಾಜದ 2021-22 ಸಾಲಿನ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರ ಗಳಲ್ಲಿ ಪಿ ಹೆಚ್ ಡಿ ಪದವಿ ಗಳಿಸಿದ ಒಟ್ಟು 86 ವಿದ್ಯಾರ್ಥಿಗಳಿಗೆ ವಿಶೇಷ ಪುರಸ್ಕಾರ ಸಮಾರಂಭ ಆದಿತ್ಯವಾರದಂದು ಟ್ರಸ್ಟ್ ಅಧ್ಯಕ್ಷರಾದ ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ […]

ನಾಳೆ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 7 […]

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರ ಹಾಕಿದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ; ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ಜಾಮೀನು

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್‌ ಕುಮಾರ್‌ ಕಟೀಲ್‌ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್‌ ರೆಡ್ಡಿ ಹಾಗೂ ಕಾನ್‌ಸ್ಟೆಬಲ್‌ […]

ಮತಾಂತರ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಅತ್ಯಂತ ಕಳವಳಕಾರಿ: ಪೇಜಾವರ ಶ್ರೀ

ಉಡುಪಿ: ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದು ಇದು ಅತ್ಯಂತ ಕಳವಳಕಾರಿ ವಿಚಾರ. ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. […]

ಎಂಎಲ್‌ಸಿ ಚುನಾವಣಾ ಕಣಕ್ಕೆ ಜಗದೀಶ್ ಶೆಟ್ಟರ್: ಜೂನ್ 30 ರಂದು ಚುನಾವಣೆ

ಬೆಂಗಳೂರು: ಜೂನ್ 30 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಮವಾರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಚಿವ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಎನ್‌ಎಸ್ ಬೋಸರಾಜು ಜೊತೆಗೆ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಕಣಕ್ಕಿಳಿಸಿದೆ. ಶೆಟ್ಟರ್ ಅವರು ಜುಲೈ 12, 2012 ರಿಂದ ಮೇ 2013 ರವರೆಗೆ 10 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಬಿಜೆಪಿ ಸರ್ಕಾರದ ನೇತೃತ್ವ ವಹಿಸಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಮತ್ತು ವಿಧಾನಸಭೆ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. […]