World Yoga Day : ಯೋಗದಲ್ಲಿ ನಟಿ ರಾಗಿಣಿ ದ್ವಿವೇದಿ ಕಂಡಂತೆ

ಸ್ಯಾಂಡಲ್‌ವುಡ್ (Sandalwood) ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ. ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಹಲವು ಯೋಗಗಳನ್ನು ಮಾಡಿ ಅವುಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಮಣಿಪಾಲ ಮಹಾಮಾಯ ಭಜನಾ ಮಂಡಳಿ ಅಧ್ಯಕ್ಷೆ ಮಾಯಾ ಕಾಮತ್ ಅವರಿಗೆ ಸನ್ಮಾನ

ಉಡುಪಿ: ಡಾ.ಸುಧಾಮೂರ್ತಿ ಮತ್ತು ಡಾ. ಪಿ. ದಯಾನಂದ ಪೈ ಪ್ರಾಯೋಜಿತ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವತಿಯಿಂದ ವಿನೂತನ ಕಾರ್ಯಕ್ರಮ ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ ಇದರ 84 ನೇ ಸರಣಿಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಭಾಸ್ಕರ ಕೊಗ್ಗ ಕಾಮತ್ ಇವರ ಅಧ್ಯಕ್ಷತೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭಜನಾ ತರಬೇತಿ ನೀಡುತ್ತಿರುವ ಮಣಿಪಾಲ ಮಹಾಮಾಯ ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಾಯಾ ಕಾಮತ್ ಇವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ರತ್ನಾಕರ ಪೈ, ನಾಗೇಶ್ ಶಾನುಬೋಗ್,ಸುಗುಣ ಶೆಟ್ಟಿ, ಸವಿತಾ ಶೆಟ್ಟಿ, ಸತೀಶ್ ಎನ್, […]

ಉಡುಪಿ: ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯೋಗ ದಿನಾಚರಣೆ

ಉಡುಪಿ: ದೈಹಿಕ ಅಂಗ ಸಾಧನೆಯೊಂದಿಗೆ ಚಿತ್ತವೃತ್ತಿ ನಿಯಂತ್ರಣವೇ ಯೋಗದ ಆದ್ಯಗುರಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಯೋಗ ತುಂಬಾ ಸಹಕಾರಿ. ಆದ್ದರಿಂದ ವಿದ್ಯಾರ್ಥಿಗಳು ಯೋಗಾಭ್ಯಾಸದತ್ತ ಒಲವು ತೋರಬೇಕು ಎಂದು ಉಡುಪಿ ಪತಂಜಲಿ ಯೋಗ ಸಮಿತಿಯ ಶ್ರೀಮತಿ ವೇದಾವತಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎನ್ಎಸ್ಎಸ್ ಮತ್ತು ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಯೋಗ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿದರು. ಪತಂಜಲಿ ಸಮಿತಿಯ […]

ಮಣಿಪಾಲ: ಮಣಿಪಾಲ ಆರೋಗ್ಯ ಕಾರ್ಡ್-2023 ನೋಂದಣಿ ಪ್ರಾರಂಭ

ಮಣಿಪಾಲ: ಮಣಿಪಾಲ ಆರೋಗ್ಯ ಸಮೂಹ ಸಂಸ್ಥೆಗಳ ಮಣಿಪಾಲ ಆರೋಗ್ಯ ಕಾರ್ಡ್-2023 ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಹೇಳಿದರು. ಅವರು ಮಂಗಳವಾರದಂದು ಮಣಿಪಾಲ ಆರೋಗ್ಯ ಕಾರ್ಡ್-2023 ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ಡಾ. ಟಿ.ಎಂ.ಎ ಪೈ ಅವರ 125 ನೇ ಜನ್ಮ ದಿನಾಚರಣೆಯಂದು ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಸಮಾಜಕ್ಕೆ ಸುಲಭವಾಗಿ ಸೌಲಭ್ಯ […]

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಪರಿಕರಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಹಾಗೂ ಹೆಚ್ಚಿನ ಇಳುವರಿ ಪಡೆದು ನಿರೀಕ್ಷಿತ ಆದಾಯ ಗಳಿಸಲು ಎಲ್ಲಾ ವರ್ಗದ ರೈತರಿಗೆ ಕೇಂದ್ರ ಸರ್ಕಾರದಿಂದ ವಾರ್ಷಿಕ 6000 ರೂ. ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ಹಾಗೂ ರಾಜ್ಯ ಸರ್ಕಾರಿಂದ 4000 ರೂ. ಗಳನ್ನು ಎರಡು ಕಂತುಗಳಲ್ಲಿ ಒಟ್ಟು 10000 ರೂ. ಗಳನ್ನು ಪಡೆಯಲು, ಸಾಗುವಳಿ […]